ಹಳದಿ ಅನಕೊಂಡ
ಹಳದಿ ಅನಕೊಂಡ

10 ಹಳದಿ ಅನಕೊಂಡ ಹಾವುಗಳ ಕಳ್ಳಸಾಗಣೆಗೆ ಯತ್ನ; ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ವಶಕ್ಕೆ

10 ಹಳದಿ ಅನಕೊಂಡ ಹಾವುಗಳೊಂದಿಗೆ ಪ್ರಯಾಣಿಸಲು ಯತ್ನಿಸಿದ್ದ ವ್ಯಕ್ತಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: 10 ಹಳದಿ ಅನಕೊಂಡ ಹಾವುಗಳೊಂದಿಗೆ ಪ್ರಯಾಣಿಸಲು ಯತ್ನಿಸಿದ್ದ ವ್ಯಕ್ತಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತ ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಎಂದು ತಿಳಿದುಬಂದಿದೆ. ಚೆಕ್ ಇನ್ ವೇಳೆ ಈತ ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿರುವುದು ಪತ್ತೆಯಾಗಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಆಗಮಿಸುವ ಪ್ರಯಾಣಿಕರ ಚೆಕ್-ಇನ್ ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ 10 ಹಳದಿ ಅನಕೊಂಡಗಳನ್ನು ಕಳ್ಳಸಾಗಣೆ ಮಾಡುವ ಪ್ರಯತ್ನವನ್ನು ತಡೆದಿದ್ದೇವೆ ಎಂದು ಹೇಳಿದ್ದಾರೆ.

ಹಳದಿ ಅನಕೊಂಡ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭದ್ರತೆ ಉಲ್ಲಂಘಿಸಿದ ಯೂಟ್ಯೂಬರ್ ಬಂಧನ

"ಪ್ರಯಾಣಿಕನನ್ನು ಬಂಧಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ. ವನ್ಯಜೀವಿ ಕಳ್ಳಸಾಗಣೆಯನ್ನು ಸಹಿಸಲಾಗುವುದಿಲ್ಲ" ಎಂದು ಕಸ್ಟಮ್ಸ್ ಅಧಿಕಾರಿಗಳು ಟ್ವೀಟ್ ಮಾಡಿದ್ದಾರೆ. ಭಾರತೀಯ ಕಾನೂನುಗಳ ಪ್ರಕಾರ ವನ್ಯಜೀವಿ ವ್ಯಾಪಾರ ಮಾಡುವುದು ಕಾನೂನುಬಾಹಿರವಾಗಿದೆ ಮತ್ತು ಕಸ್ಟಮ್ಸ್ ಕಾಯ್ದೆ, 1962 ವನ್ಯಜೀವಿ ಕಳ್ಳಸಾಗಣೆಯನ್ನು ಎದುರಿಸಲು ಹಲವು ಸೆಕ್ಷನ್ ಗಳನ್ನು ಹೊಂದಿದೆ.

Related Stories

No stories found.

Advertisement

X
Kannada Prabha
www.kannadaprabha.com