ಗದಗ: ನಾಲ್ವರು ಅಮಾಯಕರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ತಂದೆ-ತಾಯಿ ಕೊಲೆಗೆ ಸುಪಾರಿ ಕೊಟ್ಟ ಮಗ ಸೇರಿ 8 ಜನರ ಬಂಧನ

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಾಲ್ವರು ಅಮಾಯಕರ ಕೊಲೆ ಪ್ರಕರಣದ ರಹಸ್ಯವನ್ನು ಪೊಲೀಸರು ಬೇಧಿಸಿದ್ದಾರೆ.
ಹತ್ಯೆಯಾದ ನಾಲ್ವರು
ಹತ್ಯೆಯಾದ ನಾಲ್ವರು
Updated on

ಗದಗ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಾಲ್ವರು ಅಮಾಯಕರ ಕೊಲೆ ಪ್ರಕರಣದ ರಹಸ್ಯವನ್ನು ಪೊಲೀಸರು ಬೇಧಿಸಿದ್ದು, ತಂದೆ-ತಾಯಿ ಕೊಲೆಗೆ ಸುಪಾರಿ ಕೊಟ್ಟ ಹಿರಿಯ ಮಗ ಸಹಿತ ಒಟ್ಟು 8 ಜನರನ್ನು ಬಂಧಿಸಿದ್ದಾರೆ.

ಘಟನೆ ನಡೆದ 48 ಗಂಟೆಗಳ ಒಳಗಾಗಿಯೇ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಗದಗ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್ ಅವರು ತಿಳಿಸಿದ್ದಾರೆ. ಗದಗ ಎಸ್​​ಪಿ ಬಿಎಸ್ ನೇಮಗೌಡ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.

ದೂರುದಾರ ಪ್ರಕಾಶ ಬಾಕಳೆ ಅವರ ಮೊದಲ ಹೆಂಡತಿಯ ಹಿರಿಯ ಮಗ ವಿನಾಯಕ ಬಾಕಳೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಸುಪಾರಿ ಪಡೆದ ಗದಗ ರಾಜೀವಗಾಂಧಿ ನಗರ ನಿವಾಸಿ ಫಿರೋಜ್ ನಿಸಾರ ಅಹ್ಮದ್ ಖಾಜಿ(29), ಹುಡ್ಕೋ ನಿವಾಸಿ ಜಿಶಾನ್ ಮೆಹಬೂಬಅಲಿ ಖಾಜಿ(24) ಹಾಗೂ ಮಹಾರಾಷ್ಟದ ಮೀರಜ್ ನಿವಾಸಿಗಳಾದ ಸಾಹಿತ್ ಅಷ್ಪಾಕ್ ಖಾಜಿ(19), ಸೋಹೆಲ್ ಅಷ್ಪಾಕ್ ಖಾಜಿ(19), ಸುಲ್ತಾನ್ ಜಿಲಾನಿ ಖಾಜಿ(23), ಮಹೇಶ ಜಗನ್ನಾಥ ಸಾಳೋಂಕೆ (21), ವಾಹಿದ ಲಿಯಾಕತ್ ಬೇಪಾರಿ(21) ಅವರನ್ನು ಬಂಧಿಸಲಾಗಿದೆ" ಎಂದು ವಿಕಾಸ್ ಕುಮಾರ್ ಅವರು ತಿಳಿಸಿದ್ದಾರೆ.

ತಂದೆ ಪ್ರಕಾಶ ಬಾಕಳೆ ಹಾಗೂವಿನಾಯಕ ಬಾಕಳೆ ಮಧ್ಯೆ ಆಸ್ತಿ ವಿಚಾರವಾಗಿ ಕೆಲ ತಿಂಗಳ ಹಿಂದೆ ಜಗಳ ನಡೆದಿತ್ತು. ತಂದೆಗೆ ಗೊತ್ತಿಲ್ಲದಂತೆ ವಿನಾಯಕ ಆಸ್ತಿಗಳನ್ನು ಮಾರಿದ್ದರಿಂದ ಪ್ರಕಾಶ ಬಾಕಳೆ ಆಕ್ರೋಶಗೊಂಡಿದ್ದ. ಈ ವಿಚಾರವಾಗಿ ಇಬ್ಬರ ಮಧ್ಯೆ ಕಲಹ ನಡೆದಿತ್ತು. ಇದೇ ಕಾರಣಕ್ಕೆ ವಿನಾಯಕ ಕೊಲೆಗೆ ಸುಪಾರಿ ನೀಡಿದ್ದ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ವಿಕಾಸ ಕುಮಾರ್ ಮಾಹಿತಿ ನೀಡಿದ್ದಾರೆ.

8 ಜನ ಆರೋಪಿಗಳು
8 ಜನ ಆರೋಪಿಗಳು

ನಾಲ್ವರು ಅಮಾಯಕರ ಹತ್ಯೆ

ಘಟನೆ ದಿನ ಪ್ರಕಾಶ್ ಹಾಗೂ ಅವರ ಪತ್ನಿ ಸುನಂದಾ ಬೇರೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಅವರು ಸಾವಿನಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದು, ಮನೆಗೆ ನುಗ್ಗಿದ್ದ ಹಂತಕರು ಅವರ ಬದಲಿಗೆ ಕಾರ್ತಿಕ್ ಜೊತೆ ಇದ್ದ ಅಮಾಯಕ ಸಂಬಂಧಿಕರನ್ನು ಹತ್ಯೆ ಮಾಡಿದ್ದಾರೆ.

ಹತ್ಯೆಯಾದ ನಾಲ್ವರು
ಗದಗ: ನಗರ ಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಮಲಗಿದ್ದಲ್ಲೇ ಭೀಕರ ಕೊಲೆ!

ಪ್ರಕಾಶ್ ಹಾಗೂ ಸುನಂದಾ ಎಂದು ಭಾವಿಸಿ ಹಂತಕರು ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಜತೆಗಿದ್ದ ಕೊಪ್ಪಳದ ಭಾಗ್ಯ ನಗರ ನಿವಾಸಿ, ಹೋಟೆಲ್ ಉದ್ಯಮಿ ಪರಶುರಾಮ(55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ(16) ಅವರನ್ನು ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com