ಬರ ಪರಿಹಾರ: ರಾಜ್ಯದ ರೈತರಿಗೆ ಸಂದ ಜಯ- ಸಚಿವ ಕೃಷ್ಣ ಬೈರೇಗೌಡ

ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದ್ದು, ಇದು ರಾಜ್ಯದ ರೈತರ ಸಿಕ್ಕ ವಿಜಯವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಹೇಳಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದ್ದು, ಇದು ರಾಜ್ಯದ ರೈತರ ಸಿಕ್ಕ ವಿಜಯವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಪರಿಹಾರವಾಗಿ 5,662 ಕೋಟಿ ಸೇರಿದಂತೆ ಬರ ಪರಿಹಾರ ಕಾರ್ಯಗಳ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರದಿಂದ 18,172 ಕೋಟಿ ರೂ. ಮನವಿ ಮಾಡಿದೆ. ಕೇಂದ್ರವು ಕೂಡಲೇ ಆದ್ಯತೆ ಮೇರೆಗೆ ರಾಜ್ಯದ ರೈತರಿಗೆ ಬೆಳೆ ನಷ್ಟ ಪರಿಹಾರವಾಗಿ ಹಣ ಬಿಡುಗಡೆ ಮಾಡಬೇಕು ಎಂದು ಹೇಳಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ
'ಅನ್ಯಾಯ ಸಾಕು, ನ್ಯಾಯ ಕೊಡಿ ಚೊಂಬೇಶ್ವರ, ಬರ ಪರಿಹಾರ ಬಿಡುಗಡೆ ಮಾಡಿ': ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬರ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಕಳೆದ ಒಂಬತ್ತು ತಿಂಗಳಿಂದ ಕೇಂದ್ರವನ್ನು ಒತ್ತಾಯಿಸುತ್ತಲೇ ಇದೆ. ಆದರೆ, ರಾಜ್ಯದ ಮನವಿಗೆ ಕೇಂದ್ರ ಸ್ಪಂದಿಸಿಲ್ಲ. ಹೀಗಾಗಿ ನ್ಯಾಯ ಕೋರಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗುವಂತಾಗಿತ್ತು. ಇದೀಗ ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಈ ವಿಚಾರವಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದೆ. ಇದನ್ನು ರಾಜಕೀಯ ವಿಷಯವನ್ನಾಗಿ ಮಾಡಲು ಬಯಸುವುದಿಲ್ಲ. ರೈತರಿಗೆ ಪರಿಹಾರ ನೀಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com