ಬೆಳಗಾವಿ: ಸಹಪಾಠಿ ವಿದ್ಯಾರ್ಥಿನಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ, ಏಳು ಮಂದಿ ಬಂಧನ

ಏಪ್ರಿಲ್ 18ರಂದು ಬೆಳಗಾವಿಯಲ್ಲಿ ಕಾಲೇಜು ವಿದ್ಯಾರ್ಥಿ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪರಿಚಿತ ಯುವಕರ ಗುಂಪೊಂದು ತನ್ನ ಸಹಪಾಠಿ, ಅನ್ಯ ಸಮುದಾಯದ ಹುಡುಗಿಯನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ದಿದ್ದಕ್ಕಾಗಿ ಕಾಲೇಜು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಳಗಾವಿ: ಏಪ್ರಿಲ್ 18ರಂದು ಬೆಳಗಾವಿಯಲ್ಲಿ ಕಾಲೇಜು ವಿದ್ಯಾರ್ಥಿ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪರಿಚಿತ ಯುವಕರ ಗುಂಪೊಂದು ತನ್ನ ಸಹಪಾಠಿ, ಅನ್ಯ ಸಮುದಾಯದ ಹುಡುಗಿಯನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ದಿದ್ದಕ್ಕಾಗಿ ಕಾಲೇಜು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದೆ.

ಬೆಳಗಾವಿಯ ಲಿಂಗರಾಜ್ ಕಾಲೇಜಿನಲ್ಲಿ ಬಿಎ ಪ್ರಥಮ ವರ್ಷ ಓದುತ್ತಿರುವ ವಿದ್ಯಾರ್ಥಿನಿ, ಅನ್ಯ ಸಮುದಾಯದ ತನ್ನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಕಾಲೇಜಿನಲ್ಲಿ ತನಗೆ ಹಿಂದೂ ಸಮುದಾಯದ ಸ್ನೇಹಿತನಿದ್ದಾನೆ. ತನ್ನ ಕುಟುಂಬದವರು ಹಾಗೂ ಸ್ನೇಹಿತನ ಪೋಷಕರಿಗೆ ಚೆನ್ನಾಗಿ ಪರಿಚಯವಿದೆ. ತನ್ನ ಮನವಿ ಮೇರೆಗೆ ಆತ ತನ್ನ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ತನಗೆ ಲಿಫ್ಟ್ ಕೊಟ್ಟಿದ್ದ. ತರಗತಿಗಳು ಮುಗಿದ ನಂತರವೂ, ತನ್ನನ್ನು ಮನೆಗೆ ಡ್ರಾಪ್ ಮಾಡಬೇಕಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಸಹೋದ್ಯೋಗಿ ಜೊತೆ ಮಾತನಾಡಿದ್ದಕ್ಕೆ ಪತ್ನಿಗೆ ಕತ್ತರಿ, ಚಾಕುವಿನಿಂದ ಹಲ್ಲೆ ನಡೆಸಿದ ಪತಿ!

ಇಬ್ಬರೂ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಯುವಕರ ಗುಂಪೊಂದು ರಸ್ತೆಯಲ್ಲಿ ಅವರನ್ನು ಅಡ್ಡಗಟ್ಟಿದೆ. ಮುಸ್ಲಿಂ ಯುವತಿಯನ್ನು ಬೈಕ್‌ನಲ್ಲಿ ಏಕೆ ಕರೆದುಕೊಂಡು ಹೋಗುತ್ತಿದ್ದೀಯ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸಂತ್ರಸ್ತ ಮತ್ತು ಆತನ ಗೆಳತಿ ಇಬ್ಬರೂ ತಮ್ಮ ತಮ್ಮ ಕುಟುಂಬಗಳು ಪರಸ್ಪರ ಪರಿಚಯಸ್ಥರು ಎಂದು ಹೇಳಲು ಪ್ರಯತ್ನಿಸಿದ್ದಾರೆ. ಆದರೆ, ಅವರ ಮಾತನ್ನು ಕೇಳಲು ಸಿದ್ಧರಿಲ್ಲದ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇನ್ನೊಮ್ಮೆ ಯುವತಿಯನ್ನು ಭೇಟಿ ಮಾಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com