ಹಾಸನ: ಬೈಕ್ ಗೆ ಬಸ್ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಹೊತ್ತಿ ಉರಿದ KSRTC ಬಸ್

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ಮಂಗಳವಾರ ಕೆಎಸ್ಆರ್ ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾಸನ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ಮಂಗಳವಾರ ಕೆಎಸ್ಆರ್ ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಬೈಕ್​ಗೆ ಹಿಂಬದಿಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತ ರಭಸಕ್ಕೆ ರಸ್ತೆಯಲ್ಲಿಯೇ ಕೆ‌ಎಸ್‌ಆರ್‌ಟಿಸಿ ಬಸ್ ಹೊತ್ತಿ ಉರಿದಿದೆ.

ಕೂಡಲೇ ಚಾಲಕ ರಸ್ತೆಯಲ್ಲೇ ಬಸ್ ನಿಲ್ಲಿಸಿದ್ದು, ಬಸ್‌ನಿಂದ ಕೆಳಗಿಳಿದು ಪ್ರಯಾಣಿಕರು ಓಡಿದ್ದಾರೆ. ನಂತರ ಸಂಪೂರ್ಣ ಬಸ್ ಹೊತ್ತಿಉರಿದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಸಾಂದರ್ಭಿಕ ಚಿತ್ರ
ರಸ್ತೆ ಅಪಘಾತ ಹೆಚ್ಚಳ: ಬೆಂಗಳೂರಿನಲ್ಲಿ ಪ್ರತಿದಿನ ಇಬ್ಬರು ಸಾವು- ಎಡಿಜಿಪಿ ಅಲೋಕ್ ಕುಮಾರ್

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಮೃತದೇಹಗಳು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com