Indian railways
ಭಾರತೀಯ ರೈಲ್ವೆ online desk

ಲೋಕಸಭಾ ಚುನಾವಣೆ 2024: ಮತದಾನಕ್ಕಾಗಿ ವಿಶೇಷ ರೈಲುಗಳ ವ್ಯವಸ್ಥೆ

ಲೋಕಸಭಾ ಚುನಾವಣೆಗೆ ಮತದಾನ ಮಾಡಲು ಹೆಚ್ಚಿನ ಜನರು ಪ್ರಯಾಣಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ವಿಶೇಷ ರೈಲುಗಳ ವ್ಯವಸ್ಥೆಗೆ ಮುಂದಾಗಿದೆ.
Published on

ಬೆಂಗಳೂರು: ಲೋಕಸಭಾ ಚುನಾವಣೆಗೆ ಮತದಾನ ಮಾಡಲು ಹೆಚ್ಚಿನ ಜನರು ಪ್ರಯಾಣಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ವಿಶೇಷ ರೈಲುಗಳ ವ್ಯವಸ್ಥೆಗೆ ಮುಂದಾಗಿದೆ.

ಬೆಂಗಳೂರು- ಮಂಗಳೂರು ಸೆಂಟ್ರಲ್ ಮಾರ್ಗದಲ್ಲಿ ವಿಶೇಷ ರೈಲುಗಳು ಸಂಚರಿಸಲಿವೆ.

ನೈಋತ್ಯ ರೈಲ್ವೆ ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಬೆಂಗಳೂರು-ಮಂಗಳೂರು ಸೆಂಟ್ರಲ್ ವಿಶೇಷ ರೈಲು- ರೈಲು ಸಂಖ್ಯೆ.06553 ಏಪ್ರಿಲ್ 25 ರಂದು (ಗುರುವಾರ) ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಸಂಜೆ 6:00 ಗಂಟೆಗೆ ಹೊರಡಲಿದ್ದು, ಮರುದಿನ ಬೆಳಗ್ಗೆ 10 ಗಂಟೆಗೆ ಮಂಗಳೂರು ಸೆಂಟ್ರಲ್ ತಲುಪಲಿದೆ ಎಂದು ಮಾಹಿತಿ ನೀಡಿದೆ.

ಮಂಗಳೂರು ಸೆಂಟ್ರಲ್ - ಬೆಂಗಳೂರು ವಿಶೇಷ ರೈಲು- ರೈಲು ಸಂಖ್ಯೆ.06554-ಎಪ್ರಿಲ್ 26 ರಂದು (ಶುಕ್ರವಾರ) ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಸೆಂಟ್ರಲ್‌ನಿಂದ ಹೊರಡಲಿದ್ದು, ಮರುದಿನ ಮುಂಜಾನೆ 3 ಗಂಟೆಗೆ ಬೆಂಗಳೂರಿನ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

Indian railways
ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಭಾರತೀಯ ರೈಲ್ವೆ ಇತಿಹಾಸದಲ್ಲಿನ ಮಾರಣಾಂತಿಕ ಅಪಘಾತಗಳಲ್ಲೊಂದು..

ಹೆಚ್ಚುವರಿಯಾಗಿ, ನೈಋತ್ಯ ರೈಲ್ವೆ ಅಧಿಕಾರಿಗಳು ಬೆಂಗಳೂರಿನಿಂದ ಉಡುಪಿಗೆ ಸಂಪರ್ಕ ಕಲ್ಪಿಸಲು ಯಶವಂತಪುರ ಕುಂದಾಪುರ ವಿಶೇಷ ಎಕ್ಸ್‌ಪ್ರೆಸ್ ನ್ನು ಘೋಷಿಸಿದ್ದಾರೆ.

ರೈಲು ಸಂಖ್ಯೆ.06547 ಬೆಂಗಳೂರಿನ ಯಶವಂತಪುರದಿಂದ ಏಪ್ರಿಲ್ 25 ರಂದು ರಾತ್ರಿ 11:20 ಕ್ಕೆ ಹೊರಡಲಿದ್ದು, ಮರುದಿನ ಬೆಳಗ್ಗೆ 10:45 ಕ್ಕೆ ಕುಂದಾಪುರಕ್ಕೆ ಆಗಮಿಸಲಿದೆ.

ಕುಂದಾಪುರದಿಂದ ಯಶವಂತಪುರಕ್ಕೆ ಹಿಂದಿರುಗುವ ಪ್ರಯಾಣ, ರೈಲು ನಂ.06548, ಏಪ್ರಿಲ್ 26 ರಂದು ಬೆಳಿಗ್ಗೆ 11:20 ಕ್ಕೆ ಕುಂದಾಪುರದಿಂದ ಹೊರಟು ಅದೇ ದಿನ ರಾತ್ರಿ 9:50 ಕ್ಕೆ ಯಶವಂತಪುರವನ್ನು ತಲುಪಲಿದೆ. ಏಪ್ರಿಲ್ 26 ರಂದು 28 ಲೋಕಸಭಾ ಸ್ಥಾನಗಳ ಪೈಕಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಕರಾವಳಿ ಪ್ರದೇಶದ ಮತದಾರರಿಗೆ ತಡೆರಹಿತ ಪ್ರಯಾಣವನ್ನು ಸುಲಭಗೊಳಿಸುವುದು ವಿಶೇಷ ರೈಲುಗಳ ವ್ಯವಸ್ಥೆಯ ಗುರಿಯಾಗಿದೆ ಎಂದು ರೈಲ್ವೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com