ಎರಡು ಲೋಕಸಭಾ ಕ್ಷೇತ್ರಗಳಲ್ಲಿ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ: ಅಧಿಕಾರಿಗಳ ಕಾರ್ಯವೈಖರಿ ಮೇಲೆ ನಿಗಾ!

ಚುನಾವಣೆ ಸಂದರ್ಭದಲ್ಲಿ ಸೂಕ್ಷ್ಮ ಮತಗಟ್ಟೆಗಳೆಂದು ಕರೆಯಲ್ಪಡುವ ಆಯ್ದ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಮಾಡುವುದು ಸಾಮಾನ್ಯ. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಮತ್ತು ಕೊಡಗು- ಮೈಸೂರು ಎರಡು ಲೋಕಸಭಾ ಕ್ಷೇತ್ರಗಳಲ್ಲಿ ವೆಬ್‌ಕಾಸ್ಟಿಂಗ್ ಮಾಡಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಸೂಕ್ಷ್ಮ ಮತಗಟ್ಟೆಗಳೆಂದು ಕರೆಯಲ್ಪಡುವ ಆಯ್ದ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಮಾಡುವುದು ಸಾಮಾನ್ಯ. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಮತ್ತು ಕೊಡಗು- ಮೈಸೂರು ಎರಡು ಲೋಕಸಭಾ ಕ್ಷೇತ್ರಗಳಲ್ಲಿ ವೆಬ್‌ಕಾಸ್ಟಿಂಗ್ ಮಾಡಲಾಗುತ್ತಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್‌ ಮೀನಾ ಅವರ ಮಾತನಾಡಿ, ರಾಜ್ಯದಲ್ಲಿ 58,871 ಮತಗಟ್ಟೆಗಳಿದ್ದು, ಈ ಪೈಕಿ 30,602 ಮತಗಟ್ಟೆಗಳು ಹಂತ-2 ಮತ್ತು 28,269 ಮತಗಟ್ಟೆಗಳು ಹಂತ-3ರಲ್ಲಿ ಬರಲಿವೆ. ಹಂತ-2ರ ಅಡಿಯಲ್ಲಿ 19,701 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಮಾಡಲಾಗುತ್ತಿದ್ದು, 1,370 ಮತಗಟ್ಟೆಗಳನ್ನು ಸಿಸಿಟಿವಿಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ.

ಇದಲ್ಲದೇ ಎರಡು ಕ್ಷೇತ್ರಗಳ ಎಲ್ಲಾ ಬೂತ್‌ಗಳಲ್ಲಿ ವೆಬ್‌ಕಾಸ್ಟಿಂಗ್ ಮಾಡಲಾಗುವುದು. ಚುನಾವಣಾಧಿಕಾರಿಗಳು ನಡೆಸಿದ ಮೌಲ್ಯಮಾಪನ, ಚುನಾವಣಾಧಿಕಾರಿಗಳ ಬೇಡಿಕೆ ಮತ್ತು ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದು ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಯನ್ನು ಖಚಿತಪಡಿಸಿಕೊಳ್ಳುತ್ತದೆ ಎಂದು ಹೇಳಿದರು,

ವೆಬ್‌ಕಾಸ್ಟಿಂಗ್ ವೇಳೆ ಭಾರತದ ಚುನಾವಣಾ ಆಯೋಗದಿಂದ ನೇರವಾಗಿ ನೇಮಕಗೊಂಡ ಅಬ್ಸರ್ವರ್ಸ್ ಗಳ ಪಾತ್ರ ಮುಖ್ಯವಾಗುತ್ತದೆ ಎಂದು ಮತ್ತೊಬ್ಬ ಚುನಾವಣಾ ಅಧಿಕಾರಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com