ಕಾಂಗ್ರೆಸ್ 30 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ: ತೇಜಸ್ವಿ ಸೂರ್ಯ

ಕಾಂಗ್ರೆಸ್ ಪಕ್ಷ 30 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಶುಕ್ರವಾರ ಹೇಳಿದರು.
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ
Updated on

ಬೆಂಗಳೂರು: ಕಾಂಗ್ರೆಸ್ ಪಕ್ಷ 30 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಶುಕ್ರವಾರ ಹೇಳಿದರು.

ಮತ ಹಕ್ಕು ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ಪಕ್ಷವು 30ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ. ಈ ಬಗ್ಗೆ ಸಾಕಷ್ಟು ಸಮೀಕ್ಷೆಗಳೂ ಕೂಡ ಭವಿಷ್ಯ ನುಡಿದಿವೆ ಎಂದು ಹೇಳಿದರು.

ಕಾಂಗ್ರೆಸ್ ಸಂಪೂರ್ಣವಾಗಿ ಹತಾಶವಾಗಿದೆ. ಸಮೀಕ್ಷೆಗಳು ಆ ಪಕ್ಷ 30 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಹೇಳಿವೆ. ಪ್ರಧಾನಿ ವಿರುದ್ಧ ವೈಯಕ್ತಿಕ ದಾಳಿಗಳು ಮತ್ತು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಮೋದಿ ಬಲಶಾಲಿಯಾಗಿದ್ದಾರೆ ಹಾಗೂ ಬಿಜೆಪಿ ಹೆಚ್ಚು ಜನಪ್ರಿಯತೆ ಗಳಿಸಿದೆ ಇತಿಹಾಸವೇ ಹೇಳಿದೆ ಎಂದು ತಿಳಿಸಿದರು.

ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರ: ಗೆಲ್ಲಲು ಸೌಮ್ಯಾ ರೆಡ್ಡಿ ಪಣ; ಅನಂತ್ ಕುಮಾರ್ ಕುಟುಂಬ ಮೌನ; ತೇಜಸ್ವಿ ಸೂರ್ಯ ಗೆಲುವು ಕಠಿಣ!

ಇದೇ ವೇಳೆ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಮತದಾನ ಮಾಡುತ್ತಿದ್ದು, ಯುವಕರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡುವಂತೆ ಮನವಿ ಮಾಡಿದರು.

ಇಂದು ಕರ್ನಾಟಕದಲ್ಲಿ ಸಂಭ್ರಮದ ದಿನವಾಗಿದೆ. ಪ್ರಜಾಪ್ರಭುತ್ವದ ಹಬ್ಬ ನಡೆಯುತ್ತಿದೆ. ಲಕ್ಷಾಂತರ ಜನರು ಮತ ಚಲಾಯಿಸುತ್ತಿದ್ದಾರೆ. ಇದು ಕೇವಲ ಹಕ್ಕು ಮಾತ್ರವಲ್ಲ, ಕರ್ತವ್ಯವೂ ಆಗಿದೆ, ಏಕೆಂದರೆ ನಾವು ಮತದಾನ ಮಾಡದಿದ್ದರೆ ನಮ್ಮ ಧ್ವನಿಯನ್ನು ನೋಂದಾಯಿಸುವುದಂತಾಗುತ್ತದೆ. ಮತಹಕ್ಕು ಚಲಾಯಿಸುವುದರಿಂದ ಪ್ರಜಾಪ್ರಭುತ್ವಕ್ಕೆ ಅರ್ಥಪೂರ್ಣ ಕೊಡುಗೆ ನೀಡಿದಂತಾಗುತ್ತದೆ.. ಪ್ರತಿ ವರ್ಷದಂತೆ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಗಳಲ್ಲಿ ಬೂತ್ ಗಳಲ್ಲಿ ಕಂಡುಬರುತ್ತಿದ್ದಾರೆ. ಇವರಿಂದ ಯುವಕರು ಸ್ಫೂರ್ತಿ ಪಡೆದು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಬೇಕೆಂದು ಮನವಿ ಮಾಡಿಕಳ್ಳುತ್ತೇನೆಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪಕ್ಷದ ಪ್ರಣಾಳಿಕೆಯನ್ನು ವಿವರಿಸಲು ಮೋದಿಯವರನ್ನು ಭೇಟಿಯಾಗಲು ಬಯಸುತ್ತಿದ್ದಾರೆ. ಇದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇರಬಹುದಾದ ಕೆಲವು ಉತ್ತಮ ವಿಚಾರಗಳನ್ನು ಮೋದಿಯವರಿಂದ ಮಾತ್ರ ಜಾರಿಗೆ ತರಲು ಸಾಧ್ಯ ಎಂಬುದನ್ನು ಇದು ಸೂಚಿಸುತ್ತದೆ. ಮುಂದಿನ ಎರಡು ದಶಕಗಳವರೆಗೆ ನಾವು ಅಧಿಕಾರದ ಸಮೀಪಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ಒಪ್ಪಿಕೊಂಡಿರುವಂತಿದೆ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com