ಕೋಲಾರ: ಮೂಲಭೂತ ಸೌಕರ್ಯ ಕೊರತೆ, ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಕೆಲವೆಡೆ ಮೂಲಭೂತ ಸೌಕರ್ಯ ಕೊರತೆಯಿಂದ ಮತದಾನ ಬಹಿಷ್ಕರಿಸುವ ಘಟನೆಗಳು ವರದಿಯಾಗಿದೆ. ಕೋಲಾರ ತಾಲೂಕಿನ ಕೆ.ಬಿ. ಹೊಸಹಳ್ಳಿ ಗ್ರಾಮದ ಜನರು ಚುನಾವಣೆ ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಬಹಿಷ್ಕಾರ
ಚುನಾವಣೆ ಬಹಿಷ್ಕಾರ

ಕೋಲಾರ: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಕೆಲವೆಡೆ ಮೂಲಭೂತ ಸೌಕರ್ಯ ಕೊರತೆಯಿಂದ ಮತದಾನ ಬಹಿಷ್ಕರಿಸುವ ಘಟನೆಗಳು ವರದಿಯಾಗಿದೆ. ಕೋಲಾರ ತಾಲೂಕಿನ ಕೆ.ಬಿ. ಹೊಸಹಳ್ಳಿ ಗ್ರಾಮದ ಜನರು ಚುನಾವಣೆ ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಬಹಿಷ್ಕಾರ
ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ಆರಂಭ: ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದ್ದು, ಬೆಳಗ್ಗೆ 9 ಗಂಟೆಯಾದರೂ ಯಾವುದೇ ಮತದಾರರು ಸುಳಿದಿಲ್ಲ. ಪರಿಣಾಮ ಚುನಾವಣಾ ಸಿಬ್ಬಂದಿ ಕೆಲಸವಿಲ್ಲದೆ ಕೂರುವಂತಾಗಿದ್ದು, ಗ್ರಾಮದಲ್ಲಿ ಬಿಕೋ ಎನ್ನುವ ವಾತಾವರಣ ಕಂಡುಬರುತ್ತಿದೆ. ಗ್ರಾಮದಲ್ಲಿ ಸರಿಯಾದ ರಸ್ತೆ ಇಲ್ಲದೆ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಹತಾಶರಾದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com