Water situation in Karnataka: ಕರ್ನಾಟಕದ ಅಣೆಕಟ್ಟುಗಳಲ್ಲಿ ಶೇ.25% ಕ್ಕಿಂತ ಕಡಿಮೆ ನೀರಿನ ಸಂಗ್ರಹ

ಮಳೆ ಕೊರತೆ, ಭೀಕರ ಬರಗಾಲ, ಬೇಸಿಗೆ ಮತ್ತು ನೀರಿನ ಆವಿಯಾಗುವಿಕೆಯಿಂದಾಗಿ ಕರ್ನಾಟಕ ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ನೀರಿನ ಮಟ್ಟವು ಅವುಗಳ ಒಟ್ಟು ಸಂಗ್ರಹ ಸಾಮರ್ಥ್ಯದ 25% ಕ್ಕಿಂತ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಅಣೆಕಟ್ಟುಗಳಲ್ಲಿ  ನೀರಿನ ಪ್ರಮಾಣ ಕುಸಿತ
ಕರ್ನಾಟಕದ ಅಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ಕುಸಿತ

ಬೆಂಗಳೂರು: ಮಳೆ ಕೊರತೆ, ಭೀಕರ ಬರಗಾಲ, ಬೇಸಿಗೆ ಮತ್ತು ನೀರಿನ ಆವಿಯಾಗುವಿಕೆಯಿಂದಾಗಿ ಕರ್ನಾಟಕ ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ನೀರಿನ ಮಟ್ಟವು ಅವುಗಳ ಒಟ್ಟು ಸಂಗ್ರಹ ಸಾಮರ್ಥ್ಯದ 25% ಕ್ಕಿಂತ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಮಾಹಿತಿಯ ಪ್ರಕಾರ, ರಾಜ್ಯ 14 ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹ ಸಾಮರ್ಥ್ಯ 895.62 tmcft ಇದ್ದು, ಈಗ ಅವುಗಳಲ್ಲಿ ಕೇವಲ 217.75 tmcft ನೀರನ್ನು ಮಾತ್ರ ಹೊಂದಿವೆ. ಇದು ಜಲಾಶಯಗಳ ಒಟ್ಟು ಸಂಗ್ರಹಣೆಯ ಶೇ. 25% ಕ್ಕಿಂತ ಕಡಿಮೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯಗಳಲ್ಲಿ 269 ಟಿಎಂಸಿ ಅಡಿ ನೀರು ಇತ್ತು.

ತುಂಗಭದ್ರ ಜಲಾಶಯದಲ್ಲಿ ತನ್ನ ಒಟ್ಟು ಸಾಮರ್ಥ್ಯದ ಅಂದರೆ 105.79 ಟಿಎಂಸಿ ನೀರು ಸಂಗ್ರಹಕ್ಕೆ ಬದಲಾಗಿ ಈಗ ಕೇವಲ 3.77 ಟಿಎಂಸಿ ನೀರು ಇದೆ. ಅಂತೆಯೇ KRS ಅಣೆಕಟ್ಟೆಯಲ್ಲಿ 49.45 tmcft ನೀರು ಸಂಗ್ರಹ ಸಾಮರ್ಥ್ಯಕ್ಕೆ ಬದಲಾಗಿ ಇಲ್ಲಿ ಕೇವಲ 11.74 tmcft ನೀರು ಇದ್ದು, ಕಬಿನಿಯ 19.52 tmcft ಒಟ್ಟು ಸಂಗ್ರಹ ಸಾಮರ್ಥ್ಯಕ್ಕೆ ಬದಲಾಗಿ ಇಲ್ಲಿ ಕೇವಲ 7.72 tmcft ನೀರು ಇದೆ ಎಂದು ತಿಳಿದುಬಂದಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಜಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿ, 'ಸಾಮಾನ್ಯವಾಗಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತದೆ. ಜಲಾಶಯಗಳು ವರ್ಷಕ್ಕೆ ಎರಡು ಬಾರಿ ಅಂದರೆ ಆಗಸ್ಟ್ ಮತ್ತು ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ತುಂಬಿರುತ್ತವೆ.

ಇದರಿಂದ ರೈತರಿಗೆ ವರ್ಷದಲ್ಲಿ ಎರಡು ಬೆಳೆ ತೆಗೆಯಲು ಅನುಕೂಲವಾಗುತ್ತದೆ. ಆದರೆ, ಈ ವರ್ಷ ಒಮ್ಮೆ ಮಾತ್ರ ಜಲಾಶಯಗಳು ಭರ್ತಿಯಾಗಿದ್ದವು. ಅಲ್ಲದೆ ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳ ನೀರನ್ನು ತಮಿಳುನಾಡಿಗೆ ಬಿಡಲಾಗಿದೆ. ಈ ಎಲ್ಲಾ ಅಂಶಗಳು ಕರ್ನಾಟಕದ ಜಲಾಶಯಗಳಲ್ಲಿ ಕಳಪೆ ನೀರಿನ ಸಂಗ್ರಹಣೆ ಮಟ್ಟಕ್ಕೆ ಕಾರಣವಾಗಿವೆ ಎಂದು ಅವರು ಹೇಳಿದರು.

ಕರ್ನಾಟಕದ ಅಣೆಕಟ್ಟುಗಳಲ್ಲಿ  ನೀರಿನ ಪ್ರಮಾಣ ಕುಸಿತ
ಗೋವಾದಲ್ಲೂ ಜಲಕ್ಷಾಮ: 7 ಡ್ಯಾಂಗಳ ಪೈಕಿ ಮೂರರಲ್ಲಿ ಶೇ.50 ಕ್ಕಿಂತ ಕಡಿಮೆ ನೀರು!

ಅಲ್ಲದೆ ಬಿಸಿಲ ಧಗೆಗೆ ನೀರು ಆವಿಯಾಗುವಿಕೆಯಿಂದ ಜಲಾಶಯಗಳಲ್ಲಿ ನೀರಿನ ಸಾಮರ್ಥ್ಯ ನಷ್ಟವಾಗುತ್ತದೆ. ಈ ಬಾರಿ ಬಿರು ಬೇಸಿಗೆಯಿಂದಾಗಿ ನಷ್ಟವೇ ಹೆಚ್ಚು. ಕರ್ನಾಟಕವು ಏಪ್ರಿಲ್‌ನಲ್ಲಿ ಸುಮಾರು 50 ಮಿಮೀ ಮಳೆಯನ್ನು ಪಡೆಯುತ್ತದೆ, ಆದರೆ ಆವಿಯಾಗುವಿಕೆಯಿಂದ ದಿನಕ್ಕೆ ಸುಮಾರು 5 ಮಿಮೀ ನಷ್ಟವಾಗುತ್ತದೆ. ಇದರರ್ಥ ತಿಂಗಳಿಗೆ 150 ಮಿ.ಮೀ ನೀರು ನಷ್ಟವಾಗಿದೆ ಎಂದು ಅವರು ಹೇಳಿದರು.

ಕೆಎಸ್‌ಎನ್‌ಡಿಎಂಸಿಯ ಮೂಲಗಳ ಪ್ರಕಾರ ರಾಜ್ಯವು ತೀವ್ರ ಬರಗಾಲವನ್ನು ಎದುರಿಸುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಮಳೆಯಿಂದಾಗಿ ಜಲಾಶಯಗಳಿಗೆ ಸಮರ್ಪಕ ಒಳಹರಿವು ಉಂಟಾಗುತ್ತಿಲ್ಲ. ಮೇ ತಿಂಗಳಲ್ಲಿ ಮಳೆಯಾದರೂ, ಜೂನ್ ಅಂತ್ಯದವರೆಗೆ ನಮಗೆ ಉತ್ತಮ ಒಳಹರಿವು ಸಿಗುವುದಿಲ್ಲ ಎಂದು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com