ಚಾಮರಾಜನಗರ: ಮತದಾನದ ವೇಳೆ ಗುಂಪು ಘರ್ಷಣೆ: ಮನವೊಲಿಸಲು ಯತ್ನಿಸಿದ ಅಧಿಕಾರಿಗಳ ಮೇಲೂ ಗ್ರಾಮಸ್ಥರ ದಾಳಿ, ಲಾಠಿ ಚಾರ್ಜ್!

ಮತದಾನ ಬಹಿಷ್ಕಾರ ಅಥವಾ ಮತದಾನ ಮಾಡಬೇಕೇ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಸಂಭವಿಸಿದ ಘರ್ಷಣೆ ಬಳಿಕ ಹಿಂಸಾಚಾರಕ್ಕೆ ತಿರುಗಿದ್ದು, ಗ್ರಾಮಸ್ಥರಮನವೊಲಿಸಲು ತೆರಳಿದ್ದ ಅಧಿಕಾರಿಗಳ ಮೇಲೆಯೇ ಜನ ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
ಮತಕೇಂದ್ರವನ್ನು ಧ್ವಂಸಗೊಳಿಸಿರುವ ಗ್ರಾಮಸ್ಥರು.
ಮತಕೇಂದ್ರವನ್ನು ಧ್ವಂಸಗೊಳಿಸಿರುವ ಗ್ರಾಮಸ್ಥರು.

ಚಾಮರಾಜನಗರ: ಮತದಾನ ಬಹಿಷ್ಕಾರ ಅಥವಾ ಮತದಾನ ಮಾಡಬೇಕೇ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಸಂಭವಿಸಿದ ಘರ್ಷಣೆ ಬಳಿಕ ಹಿಂಸಾಚಾರಕ್ಕೆ ತಿರುಗಿದ್ದು, ಗ್ರಾಮಸ್ಥರಮನವೊಲಿಸಲು ತೆರಳಿದ್ದ ಅಧಿಕಾರಿಗಳ ಮೇಲೆಯೇ ಜನ ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಈ ವೇಳೆ ಅಧಿಕಾರಿಗಳು ಕೆಲವರ ಮನವೊಲಿಸಿ ಮತದಾನಕ್ಕೆ ಕರೆತಂದಿದ್ದಾರೆ.

ಈ ವೇಳೆ ಮತ ಕೇಂದ್ರದ ಬಳಿ ಬಂದ ಗ್ರಾಮದ ಒಂದು ಗುಂಪು, ಇಡೀ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದೇವೆ ಎಂದು ಗಲಾಟೆ ಆರಂಭಿಸಿದೆ. ಗುಂಪು ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಆಗ್ರಹಿಸಿದ್ದಾರೆ.

ಬಳಿಕ ಅಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಆರಂಭವಾಗಿ, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಬಳಿಕ ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿದ್ದು, ಮೇಜು, ಕುರ್ಚಿ, ಇವಿಎಂ ಧ್ವಂಸಮಾಡಿದ್ದಾರೆ. ಗಲಾಟೆಯಲ್ಲಿ ಕೆಲವು ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ಮತಕೇಂದ್ರವನ್ನು ಧ್ವಂಸಗೊಳಿಸಿರುವ ಗ್ರಾಮಸ್ಥರು.
Lok Sabha Election 2024 Voting Live Updates: ಮಧ್ಯಾಹ್ನ 3 ಗಂಟೆವರೆಗೆ ಶೇ.50.93 ಮತದಾನ

ಮೂಲಭೂತ ಸೌಕರ್ಯ ಕೊರತೆಯಿಂದ ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದರು.

ಕೆಲ ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದರು. ಅಧಿಕಾರಿಗಳು ಮನವೊಲಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

"ಪ್ರಾಥಮಿಕ ವರದಿಯ ಪ್ರಕಾರ, ಗ್ರಾಮಸ್ಥರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ನಮಗೆ ಮಾಹಿತಿ ಬಂದಿದೆ. ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸಂಬಂಧಿಸಿಲ್ಲ. ಆದರೆ ಗ್ರಾಮದಲ್ಲಿ ಸೂಕ್ತ ಮೂಲಸೌಕರ್ಯವಿಲ್ಲ ಅಭಿವೃದ್ಧಿಯ ಕೊರತೆ ಇದ್ದು, ಗ್ರಾಮಕ್ಕೆ ಸೂಕ್ತ ರಸ್ತೆಯೇ ಇಲ್ಲ ಎಂದು ದೂರಿದ್ದಾರೆ. ಘರ್ಷಣೆ ವೇಳೆ ಮತಗಟ್ಟೆಯೊಳಗಿದ್ದ ಎಲ್ಲ ಪೀಠೋಪಕರಣಗಳನ್ನೂ ಧ್ವಂಸಗೊಳಿಸಲಾಗಿದೆ.

ಇವಿಎಂಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರಿಂದ ಯಾವುದೇ ಗಾಯಗಳಾಗಿಲ್ಲ. ಈ ಬಗ್ಗೆ ಎಫ್‌ಐಆರ್ ದಾಖಲಿಸಲಾಗಿದೆ. ನಾವು ವಿವರವಾದ ವರದಿಯನ್ನು ಪಡೆಯುತ್ತಿದ್ದೇವೆ. ನಂತರ ಚುನಾವಣಾ ಆಯೋಗವು ನಿರ್ಧಾರ ತೆಗೆದುಕೊಳ್ಳುತ್ತದೆ'' ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ (ಕರ್ನಾಟಕ), ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.

ಘಟನೆಯಲ್ಲಿ ಭಾಗಿಯಾದವರು ಪರಾರಿಯಾಗಿದ್ದು, ಪೊಲೀಸರು ಅವರನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಆದಾಗ್ಯೂ, ಇವಿಎಂಗಳನ್ನು ನಾಶಪಡಿಸಿರುವುದರಿಂದ, ಮತದಾನದ ಸ್ಥಿತಿಯನ್ನು ನಾವು ಪರಿಶೀಲಿಸಬೇಕಾಗಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com