ಪ್ರಧಾನಿಯನ್ನು ಸ್ವಾಗತಿಸಿದ ಜಗದೀಶ್ ಶೆಟ್ಟರ್online desk
ರಾಜ್ಯ
ಬೆಳಗಾವಿಗೆ ಆಗಮಿಸಿದ ಪ್ರಧಾನಿ ಮೋದಿ: ನಾಳೆ ಸಮಾವೇಶದಲ್ಲಿ ಭಾಗಿ
ಲೋಕಸಭಾ ಚುನಾವಣೆ 2024 ರ ಮತದಾನಕ್ಕೆ ಸಜ್ಜಾಗುತ್ತಿರುವ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಆಗಮಿಸಿದರು.
ಬೆಳಗಾವಿ: ಲೋಕಸಭಾ ಚುನಾವಣೆ 2024 ರ ಮತದಾನಕ್ಕೆ ಸಜ್ಜಾಗುತ್ತಿರುವ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಆಗಮಿಸಿದರು.
ಮಾಲಿನಿ ಸಿಟಿ ಮೈದಾನದಲ್ಲಿ ನಾಳೆ (ಏ.29) ರಂದು ರ್ಯಾಲಿ ನಡೆಯಲಿದ್ದು ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಐಟಿಸಿ ಹೊಟೆಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಸ್ತವ್ಯ ಹೂಡಿದ್ದು, ರಾತ್ರಿ ಜೋಳದ ರೊಟ್ಟಿ ಭೋಜನ ಸವಿದಿದ್ದಾರೆ.
ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಪರ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಪರ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ