Prajwal Revanna ವಿಡಿಯೋ ಪ್ರಕರಣದ ತನಿಖೆಗೆ SIT ರಚನೆ: ಸಿಎಂ ಸಿದ್ದರಾಮಯ್ಯ

ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ವೀಡಿಯೋ ಕುರಿತ ತನಿಖೆಗೆ ವಿಶೇಶ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Prajwal Revanna-CM Siddaramaiah
ಪ್ರಜ್ವಲ್ ರೇವಣ್ಣ- ಸಿಎಂ ಸಿದ್ದರಾಮಯ್ಯonline desk
Updated on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ವೀಡಿಯೋ ಕುರಿತ ತನಿಖೆಗೆ ವಿಶೇಶ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಟ್ವಿಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ, ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ದೌರ್ಜನ್ಯ ನಡೆಸಿರುವ ವಿಡಿಯೊ ದೃಶ್ಯಾವಳಿಗಳ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು.

Prajwal Revanna-CM Siddaramaiah
ಲೋಕಸಭೆ ಚುನಾವಣೆ 2024: RSS ಕ್ಷಮೆಯಾಚಿಸಿದ ಹಾಸನ JDS ಅಭ್ಯರ್ಥಿ ಪ್ರಜ್ವಲ್ ರೇವಣ್ಣ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದು, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು.

ಈ ಮಧ್ಯೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಬಂದಿದೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com