ಬೆಂಗಳೂರಿನಲ್ಲಿ ಏರಿದ ಬಿಸಿಲ ದಗೆ: ನಿನ್ನೆ 38 ಡಿಗ್ರಿ ಸೆಲ್ಶಿಯಸ್ ಗಡಿ ದಾಟಿದ ತಾಪಮಾನ!

ದಿನ ಕಳೆಯುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲ ದಗೆ ಏರಿಕೆಯಾಗುತ್ತಲೇ ಇದ್ದು, ಶನಿವಾರ ದಾಖಲೆಯ 38 ಡಿಗ್ರಿ ಸೆಲ್ಶಿಯಸ್ ಉಷ್ಠಾಂಶ ದಾಖಲಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ತಾಪಮಾನ ಏರಿಕೆಯಾಗುತ್ತಿದ್ದು, ಬೇಸಿಲ ಬೇಗೆಗೆ ಜನರು ತತ್ತರಿಸಿ ಹೋಗುತ್ತಿದ್ದಾರೆ.
ಬೇಸಿಗೆ ಕರ್ನಾಟಕ
ಬೇಸಿಗೆ ಕರ್ನಾಟಕ

ಬೆಂಗಳೂರು: ದಿನ ಕಳೆಯುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲ ದಗೆ ಏರಿಕೆಯಾಗುತ್ತಲೇ ಇದ್ದು, ಶನಿವಾರ ದಾಖಲೆಯ 38 ಡಿಗ್ರಿ ಸೆಲ್ಶಿಯಸ್ ಉಷ್ಠಾಂಶ ದಾಖಲಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ತಾಪಮಾನ ಏರಿಕೆಯಾಗುತ್ತಿದ್ದು, ಬೇಸಿಲ ಬೇಗೆಗೆ ಜನರು ತತ್ತರಿಸಿ ಹೋಗುತ್ತಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿರುವ ಪ್ರಕಾರ ಪ್ರಕಾರ, ರಾಯಚೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬಾಗಲಕೋಟೆಯಲ್ಲಿ 41.7 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 41.5 ಮತ್ತು ಚಿಕ್ಕನಹಳ್ಳಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಏಪ್ರಿಲ್ 25, 2016 ರಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 39.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ನಿನ್ನೆ ದಾಖಲಾದ ತಾಪಮಾನವು ಏಪ್ರಿಲ್‌ ತಿಂಗಳಿನಲ್ಲಿ ಎರಡನೇ ಬಾರಿಗೆ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವಾಗಿದೆ ಹಾಗೂ ಏಪ್ರಿಲ್‌ನಲ್ಲಿ ನಗರದಲ್ಲಿ 1 ಮಿಮೀ ಮಳೆಯಾಗದಿರುವುದು ಇದೇ ಮೊದಲಾಗಿದೆ.

ಈ ನಡುವೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೇ 5 ರವರೆಗೆ ಹವಾಮಾನ ಇಲಾಖೆ ಹೀಟ್ ವೇವ್ ಅಲರ್ಟ್ ನೀಡಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಎಚ್ಚರಿಕೆಯನ್ನೂ ನೀಡಿದೆ.

ಬೇಸಿಗೆ ಕರ್ನಾಟಕ
ಈ ವರ್ಷ ರಾಜ್ಯದಲ್ಲಿ ತಾಪಮಾನ ಹೆಚ್ಚಳ: ಮಾವಿನ ಇಳುವರಿ ಮೇಲೆ ಹೊಡೆತ!

ಮುಂದಿನ ಮೂರು ದಿನಗಳ ಕಾಲ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಇರುತ್ತದೆ ಎಂದು ಹೇಳಿದೆ.

ಏಪ್ರಿಲ್.30ರಿಂದ ರಾಜ್ಯದ ಹಲವೆಡೆ ಲಘು ಮಳೆ

ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಮೈಸೂರು, ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಏಪ್ರಿಲ್ 30 ರಿಂದ ಮೇ 3 ರವರೆಗೆ ಲಘು ಮಳೆ ಮತ್ತು ಮೇ 2 ಮತ್ತು 3 ರಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಜೊತೆಗೆ ಬೀದರ್, ಗುಲ್ಬರ್ಗಾ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಏಪ್ರಿಲ್ 27 ರಿಂದ ಮೇ 1 ರವರೆಗೆ ಬಿಸಿಗಾಳಿಯ ಎಚ್ಚರಿಕೆಯನ್ನೂ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com