ಬೆಂಗಳೂರು: ದಕ್ಷಿಣ ಮತ್ತು ಕರಾವಳಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿದ ಒಂದು ದಿನದ ನಂತರ ಚುನಾವಣಾಧಿಕಾರಿಗಳ ಗಮನ ಕಿತ್ತೂರು, ಕಲ್ಯಾಣ ಮತ್ತು ಮಲೆನಾಡು ಕರ್ನಾಟಕ ಪ್ರದೇಶಗಳತ್ತ ನೆಟ್ಟಿದೆ. ಮೇ 7 ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗದಲ್ಲಿ ಚುನಾವಣೆ ನಡೆಯಲಿದೆ.
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಅಧಿಕಾರಿಯೊಬ್ಬರು TNIE ಪ್ರತಿನಿಧಿಯೊಂದಿಗೆ ಮಾತನಾಡುತ್ತಾ, ಇಲ್ಲಿ ಒಂದೊಂದು ಜಿಲ್ಲೆಯಲ್ಲಿ ಸಮಸ್ಯೆಗಳು ವಿಭಿನ್ನವಾಗಿವೆ. ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ಹೆಚ್ಚಾಗಿದ್ದು, ಬಳ್ಳಾರಿ, ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ ಬಿಸಿ ಮತ್ತು ಶುಷ್ಕ ಹವಾಮಾನದ ಸ್ಥಿತಿ ಚಿಂತಾಜನಕವಾಗಿದ್ದರೂ, ಪಶ್ಚಿಮ ಮತ್ತು ಪೂರ್ವದ ಘಟ್ಟ ಪ್ರದೇಶಗಳ ಭೂಪ್ರದೇಶವನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಅವರು ಹೇಳಿದರು.
ಒಟ್ಟು 172 ಪೊಲೀಸ್ ಗಡಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ, ಜೊತೆಗೆ 40 ಅಬಕಾರಿ ಇಲಾಖೆಯಿಂದ ನಿರ್ವಹಿಸಲಾಗಿದೆ. ಅಗತ್ಯವಿದ್ದರೆ, ಇನ್ನಷ್ಟು ರಚಿಸಲಾಗುವುದು. ದೇಶದಲ್ಲಿ ಮೂರನೇ ಹಂತದ ಚುನಾವಣೆ ಪ್ರಕ್ರಿಯೆ ಅಡಿಯಲ್ಲಿ ಬರುವ ಪ್ರದೇಶಗಳಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಗೋವಾ ಮತ್ತು ಮಹಾರಾಷ್ಟ್ರದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಮತದಾನ ಪೂರ್ಣಗೊಳ್ಳುವವರೆಗೆ, ತಮಿಳುನಾಡು ಮತ್ತು ಕೇರಳದ ಗಡಿ ಪ್ರದೇಶಗಳು -- ಹಂತ-2 ರ ಅಡಿಯಲ್ಲಿ 19 ಅರಣ್ಯ ಚೆಕ್‌ಪೋಸ್ಟ್‌ಗಳು ಮತ್ತು 15 ಸಾರಿಗೆ ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ ಮೂರನೇ ಹಂತದ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣದಲ್ಲಿ ಅಲ್ಪ ಏರಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಸರಾಸರಿ ಮತದಾನದ ಪ್ರಮಾಣವು ಸುಮಾರು 67-68% ಆಗಿರಬಹುದು. ಹೆಚ್ಚಿನ ತಾಪಮಾನದ ಕಾರಣ, ಸಂಜೆ 5 ಗಂಟೆಯ ನಂತರ ಮತ್ತು ಬೆಳಿಗ್ಗೆ 9 ಗಂಟೆಯ ಮೊದಲು ಮತದಾರರ ಮತದಾನ ಸಂಖ್ಯೆ ಹೆಚ್ಚಾಗಬಹುದು ಎಂದು ನಿರೀಕ್ಷಿಸುತ್ತೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
2,59,17,493 - ಹಂತ-3ರಲ್ಲಿ ಚುನಾವಣೆಗೆ ಒಳಪಡುವ ಒಟ್ಟು ಮತದಾರರ ಸಂಖ್ಯೆ
1,29,66,570 - ಮಹಿಳೆಯರು
1,29,48,978 - ಪುರುಷರು
28,269 - ಮತದಾನ ಕೇಂದ್ರಗಳು
Advertisement