KCET ಮರುಪರೀಕ್ಷೆ ಇಲ್ಲ: ಉನ್ನತ ಶಿಕ್ಷಣ ಇಲಾಖೆ, ಪಠ್ಯೇತರ ಪ್ರಶ್ನೆ ಕೈಬಿಡಲು ನಿರ್ಧಾರ

ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ಉಂಟಾಗಿದ್ದ ಗೊಂದಲ, ಮರುಪರೀಕ್ಷೆಗಳ ಆತಂಕ ಬಗೆಹರಿದಿದೆ.
ಸಿಇಟಿ ಪರೀಕ್ಷೆ
ಸಿಇಟಿ ಪರೀಕ್ಷೆ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ಉಂಟಾಗಿದ್ದ ಗೊಂದಲ, ಮರುಪರೀಕ್ಷೆಗಳ ಆತಂಕ ಬಗೆಹರಿದಿದೆ.

ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ವೇಳೆ ಇನ್ನು ಮುಂದೆ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಈ ರೀತಿಯ ಲೋಪಗಳಾಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಸಿಇಟಿ ಪರೀಕ್ಷೆ
ಸಿಇಟಿ ಗೊಂದಲ ಪರಿಹಾರಕ್ಕೆ ಸಮಿತಿ ರಚಿಸಿದ ಸರ್ಕಾರ!

ಸಿಇಟಿ ಪರೀಕ್ಷೆಯಲ್ಲಿ ಕೇಳಲಾಗಿದ್ದ ಪಠ್ಯೇತರ ಪ್ರಶ್ನೆಗಳನ್ನು ಕೈಬಿಡಲು ಉನ್ನತ ಶಿಕ್ಷಣ ನಿರ್ಧರಿಸಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯಿಂದ ಏ.18 ಮತ್ತು 19ರಂದು ನಡೆಸಲಾಗಿತ್ತು.

ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com