ಕಾರಿನಲ್ಲಿ 1.99 ಕೋಟಿ ರೂ ಪತ್ತೆ: ಕಾಂಗ್ರೆಸ್ ಮುಖಂಡ ಶರಣಕುಮಾರ್ ಮೋದಿ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು

ಇತ್ತೀಚಿಗೆ ಕಾರಿನಲ್ಲಿ 1.99 ಕೋಟಿ ರೂಪಾಯಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಶರಣಕುಮಾರ್ ಮೋದಿ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಇತ್ತೀಚಿಗೆ ಕಾರಿನಲ್ಲಿ 1.99 ಕೋಟಿ ರೂಪಾಯಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಶರಣಕುಮಾರ್ ಮೋದಿ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ.

ಕಳೆದ ಶನಿವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಶರಣಕುಮಾರ್ ಮೋದಿಯವರ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆರಹಿತ 1.99 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ಮುಖಂಡ ಮತ್ತು ಕಲಬುರಗಿಯ ಮಾಜಿ ಮೇಯರ್ ಶರಣಕುಮಾರ್ ಮೋದಿ ಮತ್ತು ಇತರ ಮೂವರ ವಿರುದ್ಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಎಫ್‌ಐಆರ್ ದಾಖಲಿಸಲಾಗಿದೆ ಮತ್ತು 1.99 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾಂದರ್ಭಿಕ ಚಿತ್ರ
BJP ಅಭ್ಯರ್ಥಿ ಡಾ. ಕೆ.ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ಹಣ ಪತ್ತೆ!

ಲಂಚ ಮತ್ತು ಅನಗತ್ಯ ಪ್ರಭಾವ ಬಳಸಿದ ಆರೋಪದ ಮೇಲೆ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123 ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೋಸ್ಟ್ ನಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com