ನಕಲಿ ಖಾತೆ ಸೃಷ್ಟಿಸಿ ಬ್ಲ್ಯಾಕ್ ಮೇಲ್: Instagram ಬಳಸುವ ಯುವತಿಯರೇ ಎಚ್ಚರ!

ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ನಗ್ನ ಫೋಟೋಗಳ ಪೋಸ್ಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಎರಡು ಪ್ರತ್ಯೇಕ ಪ್ರಕರಣಗಳು ನಗರದಲ್ಲಿ ವರದಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ನಗ್ನ ಫೋಟೋಗಳ ಪೋಸ್ಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಎರಡು ಪ್ರತ್ಯೇಕ ಪ್ರಕರಣಗಳು ನಗರದಲ್ಲಿ ವರದಿಯಾಗಿದೆ.

ದ್ವಿತೀಯ ಪಿಯು ವಿದ್ಯಾರ್ಥಿನಿಯ ನಗ್ನ ಚಿತ್ರಗಳನ್ನು ಆಕೆಯ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಅಮೃತಹಳ್ಳಿ ಪೊಲೀಸರು ಪ್ರಕರಣವೊಂದನ್ನು ದಾಖಲಿಸಿಕೊಂಡಿದ್ದಾರೆ.

ಯುವತಿಯ ಹಳೆಯ ಇನ್‌ಸ್ಟಾಗ್ರಾಮ್ ಖಾತೆಯನ್ನು ಆಕೆಯ ಸ್ನೇಹಿತರು ಯಾರೋ ಹ್ಯಾಕ್ ಮಾಡಿರಬೇಕು. ಹಳೆಯ ಇನ್‌ಸ್ಟಾಗ್ರಾಮ್ ಖಾತೆಯಿಂದ ಇತರರಿಗೆ ರಿಕ್ವೆಸ್ಟ್ ಕಳುಹಿಸಿರಬೇಕು ಎಂದು ಪೊಲೀಸರು ಹೇಳಿದ್ದಾರೆ

ಸಂಗ್ರಹ ಚಿತ್ರ
ನಕಲಿ ಖಾತೆ ಸೃಷ್ಟಿಸಿ ಬೆಂಗಳೂರು ಪೊಲೀಸರ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ವೈದ್ಯಕೀಯ ವಿದ್ಯಾರ್ಥಿ ಬಂಧನ

ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದವರಿಗೆ ಯುವತಿಯ ತಾಯಿಯ ಅಶ್ಲೀಲ ಫೋಟೋಗಳನ್ನು ಸೃಷ್ಟಿಸಿ ಕಳುಹಿಸಿದ್ದಾರೆ. ಆರೋಪಿಗಳು ಮೊದಲಿಗೆ ಯುವತಿಗೆ ಹಣದ ಬೇಡಿಕೆಯನ್ನು ಇಟ್ಟಿದ್ದಾರೆ. ತಾಯಿಯ ಅಶ್ಲೀಲ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಹಾಕಬಾರದು ಎಂದರೆ, ತನ್ನ ನಗ್ನ ಫೋಟೋವನ್ನು ಕಳುಹಿಸುವಂತೆ ತಿಳಿಸಿದ್ದಾರೆ. ಇದಕ್ಕೆ ಹೆದರಿದ ಯುವತಿ ಫೋಟೋವನ್ನು ಕಳುಹಿಸಿದ್ದಾಳೆ. ನಂತರ ಆರೋಪಿಗಳು ಯುವತಿಯ ಅಶ್ಲೀಲ ಫೋಟೋವನ್ನು ಹರಿಬಿಟ್ಟಿದ್ದಾರೆ. ಇದರ ಹಿಂದೆ ವೈಯಕ್ತಿಕ ದ್ವೇಷ ಇರುವ ಶಂಕೆಗಳು ವ್ಯಕ್ತವಾಗಿದೆ. ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮಹಿಳೆಯೊಬ್ಬರು ಹೈಗ್ರೌಂಡ್ಸ್ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ದೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಅಶ್ಲೀಲ ಚಿತ್ರಗಳನ್ನು ಸೃಷ್ಟಿಸಿ 5,000 ರೂ.ಗೆ ಬೇಡಿಕೆಯಿಟ್ಟಿದ್ದಾನೆ. ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆಂದು ಆರೋಪಿಸಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com