ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ಕೋರ್ ಕಮಿಟಿ ಸಭೆ ನಂತರ ಪ್ರಜ್ವಲ್ ರೇವಣ್ಣ ಉಚ್ಛಾಟನೆ ಸಾಧ್ಯತೆ!

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ಶಿವಮೊಗ್ಗ: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಸಲಿದೆ, ಸಭೆಯಲ್ಲಿ ಚರ್ಚಿಸಿದ ನಂತರ ಪ್ರಜ್ವಲ್ ರೇವಣ್ಣ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ಇದೇ ವೇಳೆ ಶಿವಮೊಗ್ಗದಲ್ಲಿ ಮಾತನಾಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ತೀರ್ಮಾನಿಸಿದ್ದಾರೆ. ಮಂಗಳವಾರ ನಡೆಯುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಆ ಬಗ್ಗೆ ಅಧಿಕೃತ ಅದೇಶ ಹೊರಡಿಸಲಾಗುವುದು ಎಂದು ಎಂದು ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಪ್ರಜ್ವಲ್‌ ಅವರ ಉಚ್ಚಾಟನೆಯ ಬಗ್ಗೆ ಭಾನುವಾರ ರಾತ್ರಿಯೇ ದೇವೇಗೌಡರ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದರು.

ಪ್ರಜ್ವಲ್ ರೇವಣ್ಣ
ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ದೇಶ ತೊರೆಯಲು ಬಿಜೆಪಿ ಸಹಾಯ ಮಾಡಿದೆ; ಪ್ರಿಯಾಂಕ್ ಖರ್ಗೆ

ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನೂ ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ಆಗಿದ್ದರೆ ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು ಎಂಬ ನನ್ನ ನಿಲುವು ಮುಂದುವರೆಯಲಿದೆ ಎಂದು ಹೇಳಿದರು.

ಪ್ರಕರಣದ ಗಂಭೀರತೆ ಅರಿತ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಸ್ವತಃ ತಮ್ಮ ಮೊಮ್ಮಗನನ್ನೇ ಪಕ್ಷದಿಂದ ಉಚ್ಛಾಟನೆ ಮಾಡಲು ಆದೇಶಿಸಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದು, ಹಾಸನದಲ್ಲಿ ರಾಶಿ ರಾಶಿ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಹಾದಿ ಬೀದಿಯಲ್ಲಿ ಸಿಕ್ಕಿದ್ದವು. ಈ ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿ ಆಗಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೂ ಮುಜುಗರ ಉಂಟಾಗಿತ್ತು. ಅಲ್ಲದೆ, ಸ್ವತಃ ಜೆಡಿಎಸ್ ಶಾಸಕರೇ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಜ್ವಲ್ ರೇವಣ್ಣನ ಜೆಡಿಎಸ್ ಪಕ್ಷದಿಂದಲೇ ಉಚ್ಛಾಟನೆ ಮಾಡಬೇಕು ಎಂದು ಬಂಡಾಯ ಎದ್ದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com