ಮಾಜಿ ಸಿಎಂ SM ಕೃಷ್ಣ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, "ಸಣ್ಣ ಕಾಯಿಲೆಗೆ" ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೋಮವಾರ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
ಎಸ್‌ಎಂ ಕೃಷ್ಣ
ಎಸ್‌ಎಂ ಕೃಷ್ಣ

ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, "ಸಣ್ಣ ಕಾಯಿಲೆಗೆ" ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೋಮವಾರ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

91 ವರ್ಷ ವರ್ಷದ ಮಾಜಿ ಸಿಎಂ ಆರೋಗ್ಯ "ವೈದ್ಯಕೀಯವಾಗಿ ಸ್ಥಿರವಾಗಿದೆ" ಮತ್ತು ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಡಾ. ಸತ್ಯನಾರಾಯಣ ಮೈಸೂರು ಮತ್ತು ವೈದ್ಯಕೀಯ ತಜ್ಞರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆ ತಿಳಿಸಿದೆ.

"ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಆತಂಕ ಪಡುವ ಅಗತ್ಯವಿಲ್ಲ" ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಎಂ ಕೃಷ್ಣ
ನನ್ನ ಬಳಿ ಅಷ್ಟೊಂದು ಹಣವಿಲ್ಲ, ನಾನು ಈಗ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಎಸ್ ಎಂ ಕೃಷ್ಣ

ಎಸ್ಎಂ ಕೃಷ್ಣ ಅವರು ಕಳೆದ ಏಪ್ರಿಲ್ 22ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು. ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕೃಷ್ಣ ಅವರು ಅಕ್ಟೋಬರ್ 11, 1999 ರಿಂದ ಮೇ 28, 2004 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅವರು 2009 ರಿಂದ 2012 ರವರೆಗೆ ಮನಮೋಹನ್ ಸಿಂಗ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮತ್ತು ಮಹಾರಾಷ್ಟ್ರ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com