ಚಾಮರಾಜನಗರ: ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಮರು ಮತದಾನ ಶಾಂತಿಯುತ

ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಹನೂರಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಸೋಮವಾರ ಶಾಂತಿಯುತವಾಗಿ ಮರು ಮತದಾನ ನಡೆಯಿತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಹನೂರಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಸೋಮವಾರ ಶಾಂತಿಯುತವಾಗಿ ಮರು ಮತದಾನ ನಡೆಯಿತು.

ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಎಪ್ರಿಲ್ 26ರಂದು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿತ್ತು.

ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಯಿತು.

ಸಾಂದರ್ಭಿಕ ಚಿತ್ರ
ಚಾಮರಾಜನಗರ: ಮತದಾನದ ವೇಳೆ ಗುಂಪು ಘರ್ಷಣೆ: ಮನವೊಲಿಸಲು ಯತ್ನಿಸಿದ ಅಧಿಕಾರಿಗಳ ಮೇಲೂ ಗ್ರಾಮಸ್ಥರ ದಾಳಿ, ಲಾಠಿ ಚಾರ್ಜ್!

ಮರು ಮತದಾನ ಉತ್ತಮವಾಗಿ ಮತ್ತು ಶಾಂತಿಯುತವಾಗಿ ನಡೆದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಪಿಟಿಐಗೆ ತಿಳಿಸಿದ್ದಾರೆ.

ಜಿಲ್ಲಾಡಳಿತದ ಪ್ರಕಾರ, ಸಮರ್ಪಕ ಮೂಲಸೌಕರ್ಯ ಅಭಿವೃದ್ಧಿಯ ಕೊರತೆಯನ್ನು ಮುಂದಿಟ್ಟು ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಈ ಹಿಂದೆ ನಿರ್ಧರಿಸಿದ್ದರು. ಆದರೆ, ಸ್ಥಳೀಯ ಅಧಿಕಾರಿಗಳ ಭರವಸೆ ಮತ್ತು ಪ್ರಯತ್ನದ ನಂತರ ಮತದಾನ ನಡೆದಿದ್ದು, ಏಪ್ರಿಲ್ 26 ರಂದು ಒಂದು ಗುಂಪು ಮತದಾನ ಮಾಡಲು ಬಯಸಿದ್ದರೆ, ಇನ್ನೊಂದು ಗುಂಪು ಬಹಿಷ್ಕಾರಕ್ಕೆ ಉತ್ಸುಕವಾಗಿತ್ತು, ಇದು ಅವರ ನಡುವೆ ಘರ್ಷಣೆಗೆ ಕಾರಣವಾಗಿ ಇವಿಎಂಗಳನ್ನು ಹಾನಿಗೊಳಿಸಿದರು ಮತ್ತು ಕಲ್ಲು ತೂರಾಟದಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com