
ಬೆಂಗಳೂರು: ಹಗಲು ಹೊತ್ತು ವಿಪರೀತ ಬಿಸಿಲು, ರಾತ್ರಿಯಲ್ಲಿಯೂ ಬಿಸಿಗಾಳಿ ಜನರನ್ನು ಬೆಂಡಾಗಿಸಿದೆ. ಬೆಂಗಳೂರಿನಲ್ಲಿ ಮೊನ್ನೆ ಭಾನುವಾರ ಮತ್ತು ಸೋಮವಾರದಂದು ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಕಳೆದ ಹತ್ತು ವರ್ಷಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಗರಿಷ್ಠ ಕನಿಷ್ಠ ಮಟ್ಟದ ತಾಪಮಾನವಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇವಲ ಹಗಲಿನ ಶಾಖದ ಅಲೆಯ ಎಚ್ಚರಿಕೆಯನ್ನು ಮಾತ್ರವಲ್ಲದೆ, ಹಲವು ಜಿಲ್ಲೆಗಳಲ್ಲಿ ಮೇ 3ರವರೆಗೆ 'ಶಾಖದ ರಾತ್ರಿ' ಎಚ್ಚರಿಕೆ ಮತ್ತು 'ಆರೆಂಜ್ ಅಲರ್ಟ್ 'ನ್ನು ನೀಡಿದೆ.
ಭಾನುವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.5 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ನಿನ್ನೆ ಸೋಮವಾರ ಕ್ರಮವಾಗಿ 37.8 ಡಿಗ್ರಿ ಸೆಲ್ಸಿಯಸ್ ಮತ್ತು 25 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ವರ್ಷದ ಈ ಸಮಯದಲ್ಲಿ ಸಾಮಾನ್ಯ ಕನಿಷ್ಠ ತಾಪಮಾನಕ್ಕಿಂತ 2.5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.
ಕಲಬುರಗಿ, ಬಾಗಲಕೋಟೆ ಮತ್ತು ರಾಯಚೂರಿನಲ್ಲಿ ಕನಿಷ್ಠ ತಾಪಮಾನ 3 ರಿಂದ 4.8 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿದೆ.
ಕಲಬುರಗಿಯಲ್ಲಿ ಭಾನುವಾರ ಸಾಮಾನ್ಯ ತಾಪಮಾನ 26 ಡಿಗ್ರಿ ಸೆಲ್ಸಿಯಸ್‌ಗೆ ವಿರುದ್ಧವಾಗಿ 30.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, 4.8 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ. ರಾಯಚೂರಿನಲ್ಲಿ ಸಾಮಾನ್ಯ 25 ರ ವಿರುದ್ಧ 28.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ, ಆದರೆ ಬಾಗಲಕೋಟೆಯಲ್ಲಿ ಕನಿಷ್ಠ 28.1 ಡಿಗ್ರಿ ಸೆಲ್ಸಿಯಸ್ 25 ಡಿಗ್ರಿ ಸೆಲ್ಸಿಯಸ್, ಅನುಕ್ರಮವಾಗಿ 3.8 ಡಿಗ್ರಿ ಸೆಲ್ಸಿಯಸ್ ಮತ್ತು 3.1 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರದ 18 ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಏಪ್ರಿಲ್ 29 ರಿಂದ ಮೇ 3ರವರೆಗೆ ಬಿಸಿಗಾಳಿ ಬೀಸಬಹುದು ಎಂದು ಎಚ್ಚರಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಶಾಖ ಸಂಬಂಧಿತ ಕಾಯಿಲೆಗಳ ಬಗ್ಗೆ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ, ವಿಶೇಷವಾಗಿ ವೃದ್ಧರು ಮತ್ತು ಮಕ್ಕಳಿಗೆ, ನೇರ ಬಿಸಿಲಿಗೆ ಹೋಗದಂತೆ ಮತ್ತು ಮಧ್ಯಾಹ್ನದಿಂದ 3 ಗಂಟೆಯವರೆಗೆ ಮನೆಯೊಳಗೆ ಇರುವಂತೆ ಎಚ್ಚರಿಕೆ ನೀಡಿದೆ. ಇದು ಶಿಶುಗಳು, ವೃದ್ಧರು ಮತ್ತು ದೀರ್ಘಕಾಲದ ಕಾಯಿಲೆಗಳಂತಹ ದುರ್ಬಲ ವರ್ಗದ ಜನರಿಗೆ ಎಚ್ಚರಿಕೆ ನೀಡಿದೆ.
Advertisement