Prajwal Revanna ಅಮಾನತು; ಹುಬ್ಬಳ್ಳಿಯಲ್ಲಿ 'ಕೈ-JDS ಕಾರ್ಯಕರ್ತರ ಜಟಾಪಟಿ; ಪೆನ್ ಡ್ರೈವ್ ಕೊಟ್ಟಿದ್ದು ನಾನೇ ಎಂದ ಕಾರು ಚಾಲಕ- ಈ ದಿನದ ಸುದ್ದಿ ಮುಖ್ಯಾಂಶಗಳು 30-04-2024

ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಧಿಕೃತವಾಗಿ ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿಂದು ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

1. ಪ್ರಜ್ವಲ್ ರೇವಣ್ಣ ಅಮಾನತು

ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಧಿಕೃತವಾಗಿ ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿಂದು ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೆಯೇ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೂ ಶೋಕಾಸ್ ನೋಟಿಸ್ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಈ ವಿಷಯ ತಿಳಿಸಿದ್ದಾರೆ.

2. ಜೆಡಿಎಸ್ ಕೋರ್ ಕಮಿಟಿ ಸಭೆ; ಹುಬ್ಬಳ್ಳಿಯಲ್ಲಿ JDS-ಕೈ ಕಾರ್ಯಕರ್ತರ ಜಟಾಪಟಿ

ಈ ಮಧ್ಯೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಂಗಳವಾರ ಭಾರಿ ಜಟಾಪಟಿ ನಡೆದಿದೆ. ಹೆಚ್ ಡಿ. ಕುಮಾರಸ್ವಾಮಿ ತಂಗಿದ್ದ ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಹೋಟೆಲ್ ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಾಂಗ್ರೆಸ್ ಪ್ರತಿಭಟನಾಕಾರರನ್ನು ಜೆಡಿಎಸ್ ಕಾರ್ಯಕರ್ತರು ತಡೆದಿದ್ದಾರೆ. ಈ ವೇಳೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ, ವಾಗ್ವಾದ ನಡೆದಿದ್ದು, ಪರಿಸ್ಥಿತಿ ಕೈ ಕೈ ಮಿಲಾಯಿಸುವ ತಲುಪಿತು. ನಂತರ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.

3. ಸೆಕ್ಸ್ ಹಗರಣ ಬಯಲಾಗಿದ್ದು ಹೇಗೆ? ವಿವರಿಸಿದ ದೇವರಾಜೇಗೌಡ

ಪ್ರಜ್ವಲ್ ರೇವಣ್ಣನವರಿಗೆ ಸಂಬಂಧಿಸಿದ್ದು ಎಂದು ಹೇಳಲಾಗುತ್ತಿರುವ ವಿಡಿಯೊ ಹೊಂದಿರುವ ಪೆನ್ ಡ್ರೈವ್ ಬಹಿರಂಗವಾಗಿದ್ದು ಹೇಗೆ ಎಂಬುದನ್ನು ಹೊಳೆ ನರಸೀಪುರ ವಿಧಾನಸಭೆ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ, ವಕೀಲ ದೇವರಾಜೇಗೌಡ ಬಹಿರಂಗಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ವಿಡಿಯೋ ವಿಚಾರ 2023 ರಲ್ಲೇ ಬಂದಿತ್ತು. ಆದರೆ, ಪ್ರಜ್ವಲ್ ರೇವಣ್ಣ ನ್ಯಾಯಾಲಯದಲ್ಲಿ ಸ್ಟೇ ಪಡೆದುಕೊಂಡಿದ್ದರು. ಈ ಹಿಂದೆ ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಮೇಲೂ ಸ್ಟೇ ಪಡೆದಿದ್ದರು. ಕಾರ್ತಿಕ್‌ ಭೇಟಿ ಮಾಡಿದ ಸಂದರ್ಭದಲ್ಲಿ ಹಲವಾರು ಅಶ್ಲೀಲ ವೀಡಿಯೋ ಇತ್ತು. ಅದನ್ನು ಡಿಕೆ ಶಿವಕುಮಾರ್ ಸೇರಿ ಕೆಲ ಕಾಂಗ್ರೆಸ್ ನಾಯಕರಿಗೆ ಕಳುಹಿಸಿದೆ ಎಂದಿದ್ದಾರೆ.

4. ಪೆನ್ ಡ್ರೈವ್ ಕೊಟ್ಟಿದ್ದು ನಾನೇ ಎಂದ ಮಾಜಿ ಕಾರು ಚಾಲಕ

ಮಾಡಲಾಗಿತ್ತು. ಆದ್ರೆ ಇ ಮೇಲ್ ಡೆಲಿವರ್ ಆಗಿರಲಿಲ್ಲ. ನಂತರ ವಿಜೇಯೇಂದ್ರ ಅವರಿಗೂ ವಿಡಿಯೋ ಬಗ್ಗೆ ಪತ್ರ ಬರೆದು ಕಛೇರಿಗೆ ನೀಡಿದ್ದೆ. ಅವರು ಹೇಳಿದಂತೆ ಪತ್ರ ಅವರಿಗೂ ತಲುಪಿಲ್ಲ ಎಂದು ಹೇಳಿದ್ದಾರೆ. ಈ ಮಧ್ಯೆ ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್, ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಅದರಲ್ಲಿ ‘ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು, ಹಿಂಸೆ ಕೊಟ್ಟು ಹಲ್ಲೆ ಮಾಡಿದರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ ಎಂದು ಹೇಳಿದ್ದಾರೆ. ದೇವೇಗೌಡರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದ ದೇವರಾಜೇಗೌಡಗೆ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟಿದ್ದೆ. ಪೆನ್‌ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿಕೊಳ್ಳುತ್ತೇನೆ ಎಂದಿದ್ದಾರೆ.

5. ಕರ್ನಾಟಕ ಪೊಲೀಸರಿಗೆ NCW ನೋಟಿಸ್

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳ ಕುರಿತು ಮೂರು ದಿನಗಳಲ್ಲಿ ವರದಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ. ಈ ಸಂಬಂಧ ಕರ್ನಾಟಕ ಡಿಜಿಪಿಗೆ ಪತ್ರ ಬರೆದಿರುವ NCW, ಪ್ರಜ್ವಲ್ ರೇವಣ್ಣ ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ.

6. ಶಿವಮೊಗ್ಗ: JP ನಡ್ಡಾ- BY ರಾಘವೇಂದ್ರ ಸಭೆ

ಮೇ 7 ರಂದು ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗದಲ್ಲಿಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಪ್ರಚಾರ ಸಭೆ ನಡೆಸಿದರು. ಸಮಾವೇಶದಲ್ಲಿ ಮಾತನಾಡಿದ ಅವರು, ಧರ್ಮಾಧಾರಿತ ಮೀಸಲಾತಿ ವಿಚಾರವನ್ನು ಸಂವಿಧಾನದ ಪ್ರಕಾರ ಮಾಡಲಾಗದಿದ್ದರೂ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಕೆಟ್ಟ ಮತ್ತು ವಿಭಜಕ ಗುಣ ಹೊಂದಿದೆ ಎಂದು ಆರೋಪಿಸಿದರು. ನಂತರ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರವಾಗಿ ರೋಡ್ ಶೋ ನಡೆಸಿದ ನಡ್ಡಾ, ಕಾಗಿನೆಲೆ ಪೀಠಾಧ್ಯಕ್ಷ ನಿರಂಜನಾನಂದ ಪುರಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com