ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ: ಸಿದ್ದರಾಮಯ್ಯಗೆ ರಾಕೇಶ್ ಘಟನೆ ನೆನಪಿಸಿದ ಕುಮಾರಸ್ವಾಮಿ, ಸಿಎಂ ತಿರುಗೇಟು

ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧದ ಸೆಕ್ಸ್ ವಿಡಿಯೋ ಪ್ರಕರಣ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ವಾಕ್ಸಮರ ಮುಂದುವರೆದಿದ್ದು, ಈ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರನ್ನು ಎಳೆದುತರುತ್ತಿರುವುದಕ್ಕೆ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮಂಗಳವಾರ ಕಿಡಿಕಾರಿದರು.
ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧದ ಸೆಕ್ಸ್ ವಿಡಿಯೋ ಪ್ರಕರಣ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ವಾಕ್ಸಮರ ಮುಂದುವರೆದಿದ್ದು, ಈ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಎಳೆದುತರುತ್ತಿರುವುದಕ್ಕೆ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮಂಗಳವಾರ ಕಿಡಿಕಾರಿದರು. ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಮತ್ತು ಎಚ್‌ಡಿ ಕುಮಾರಸ್ವಾಮಿ ಅವರ ಅಣ್ಣನ ಮಗ.

ಈ ಘಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದಿರುವ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸರ್ಕಾರ ಹೇಗೆ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದಾರೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಕುಟುಂಬ ಅನುಭವಿಸಿದ ದುರಂತ ನೆನಪಿದೆಯೇ. ಆಗ ಕೇಂದ್ರ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನಿಮ್ಮನ್ನು ರಕ್ಷಿಸಿದ್ದಾರೆ ಎಂದರು.

ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
Prajwal Revanna: ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಅಮಾನತು!

ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಈ ವಿಷಯದಲ್ಲಿ ಎಳೆದಿದೆ. ಪ್ರಧಾನಿ ಮೋದಿಗೂ ವಿಷಯಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, “ನೀವು ಈ ಘಟನೆಯನ್ನು ಪ್ರಧಾನಿ ಮೋದಿಗೆ ಏಕೆ ಸಂಪರ್ಕಿಸುತ್ತಿದ್ದೀರಿ? ನಿಮ್ಮ ಕುಟುಂಬಕ್ಕೆ ಏನಾಯಿತು ಎಂಬುದನ್ನು ನೆನಪಿಸಿಕೊಳ್ಳಿ ಎಂದರು.

ಲೈಂಗಿಕ ಹಗರಣದ ಸಂತ್ರಸ್ತರು ದೂರು ನೀಡುವ ಮುನ್ನವೇ ಮುಖ್ಯಮಂತ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹಸ್ತಾಂತರಿಸುವುದು ಹೇಗೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಮಹಿಳೆಯರ ಮೇಲೆ ಲೈಂಗಿಕ ಶೋಷಣೆ, ದೌರ್ಜನ್ಯ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೇವೇಗೌಡರ ಕುಟುಂಬಕ್ಕೆ ಮಾನಹಾನಿ ಮಾಡುವ ಷಡ್ಯಂತ್ರ ನಡೆಯುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಹಳೆಯ ಪ್ರಕರಣವನ್ನು ಮುನ್ನೆಲೆಗೆ ತರಲಾಗಿದೆ.''ರಾಜ್ಯ ಮಹಿಳಾ ಆಯೋಗದ ಹೇಳಿಕೆ ಮೇರೆಗೆ ಎಸ್‌ಐಟಿ ರಚಿಸಿರುವುದಾಗಿ ಮುಖ್ಯಮಂತ್ರಿ ಹೇಳಿಕೊಂಡಿದ್ದಾರೆ. ಮಹಿಳೆಯರು ನೀಡಿದ ದೂರುಗಳನ್ನು ಪಡೆದುಕೊಂಡಿದ್ದಾರೆ. 2012-13ರಲ್ಲಿ ಪ್ರಜ್ವಲ್ ರೇವಣ್ಣ ಅವರ ಮನೆಗೆ ಸಂತ್ರಸ್ತರಲ್ಲಿ ಒಬ್ಬಳು ಮನೆಕೆಲಸಕ್ಕೆ ಸೇರಿದ್ದರು. ಈಗ ಯಾಕೆ ದೂರು ಕೊಟ್ಟಿದ್ದಾರೆ? ಇದು ಮೈತ್ರಿಯನ್ನು ಸೋಲಿಸುವ ಷಡ್ಯಂತ್ರ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ನಾನೂ ನೋಡಿದ್ದೇನೆ, ತಾಯಿ ವಯಸ್ಸಿನ ಮನೆಗೆಲಸದವರೊಂದಿಗೆ ಅಸಹ್ಯ ನೋಡೋಕಾಗ್ಲಿಲ್ಲ: ಡಿ.ಕೆ. ಸುರೇಶ್

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, 2000 ವಿಡಿಯೋಗಳಿವೆ ಎಂದು ಹೇಳುತ್ತೀರಿ. ಅವರು ಎಲ್ಲಿ ಸಿದ್ಧಪಡಿಸಿದರು? ಇಷ್ಟು ವಿಡಿಯೋಗಳಿದ್ದರೆ ಪ್ರಜ್ವಲ್ ರೇವಣ್ಣ ತಮ್ಮ ಐದು ವರ್ಷಗಳ ಅವಧಿಯಲ್ಲಿ ಅದೊಂದನ್ನೇ ಮಾಡಿದ್ದಾರಾ?

ಸಿದ್ದರಾಮಯ್ಯ ಅವರೇ ಸಂತ್ರಸ್ತರ ಗುರುತು ಬಹಿರಂಗವಾಗಿದೆ. ಅವರಿಗೆ ಏನಾದರೂ ಸಂಭವಿಸಿದರೆ ಯಾರು ಹೊಣೆ? ಅವರಲ್ಲಿ ಕೆಲವರು ಆತ್ಮಹತ್ಯೆ ಮಾಡಿಕೊಂಡರೆ ಯಾರು ಹೊಣೆ ಹೊರುತ್ತಾರೆ? ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ರಾಕೇಶ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಎಂದಿಗೂ ಮಾತನಾಡಿರಲಿಲ್ಲ ಎಂದು ಹೇಳಿದರು. ಇಂದು ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳ್ತಿರುವುದು ಎಲ್ಲವೂ ಸುಳ್ಳು ಎಂದಿದ್ದಾರೆ. ನಾನು ಮೋದಿ ಜೊತೆಗೆ ಮಾತನಾಡಿಯೇ ಇಲ್ಲ. ನನ್ನ ಮಗ ಸತ್ತಿರುವುದು ಹೊರ ದೇಶದಲ್ಲಿ. ಡೆಡ್ ಬಾಡಿ ತಂದಿದ್ದೇವೆ. ಕುಮಾರಸ್ವಾಮಿ ಆರೋಪ ಎಲ್ಲವೂ ಸುಳ್ಳು ಸುಳ್ಳು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com