ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಮನೆ ಮಾಲೀಕನನ್ನು ಬಂಧಿಸಿದ ಪೊಲೀಸರು

ಮಂಗಳವಾರ ಬೆಂಗಳೂರಿನ ಹೊರವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮನೆ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
Published on

ಬೆಂಗಳೂರು: ಮಂಗಳವಾರ ಬೆಂಗಳೂರಿನ ಹೊರವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮನೆ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಆಕೆ ಒಂಟಿಯಾಗಿರುವುದನ್ನು ಗಮನಿಸಿದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಕುಟುಂಬವು ಒಂದು ತಿಂಗಳ ಹಿಂದೆ ಆ ಮನೆಯಲ್ಲಿ ಬಾಡಿಗೆಗೆ ಇರಲು ಬಂದಿತ್ತು.

ಸಂತ್ರಸ್ತೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾತಿನಿಧಿಕ ಚಿತ್ರ
ಕುಡಿದ ಮತ್ತಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಯುವಕನ ಬಂಧನ

ಪೊಲೀಸರು ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com