ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್-ಬಿಜೆಪಿ ಮೈತ್ರಿಗೆ ತೊಂದರೆಯಿಲ್ಲ- ಪ್ರಹ್ಲಾದ್ ಜೋಶಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜೆಡಿಎಸ್- ಬಿಜೆಪಿ ಮೈತ್ರಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜೆಡಿಎಸ್- ಬಿಜೆಪಿ ಮೈತ್ರಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿ ಅವರು, ಪ್ರಜ್ವಲ್ ರೇವಣ್ಣ ವೈಯಕ್ತಿಕವಾಗಿ ತಪ್ಪು ಮಾಡಿದ್ದರೆ ಅದಕ್ಕೆ ಸರ್ಕಾರ, ಕಾನೂನು ಕ್ರಮ ಕೈಗೊಳ್ಳಲಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ ಎಂದವರಿಗೆ ಅವರು ತಿರುಗೇಟು ನೀಡಿದ್ದಾರೆ. ವೈಯಕ್ತಿಕವಾಗಿ ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕ್ರಮವಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲಿ ಎಂದು ಹೇಳಿದರು.

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ವಿಚಾರದಲ್ಲಿ ಈಗಾಗಲೇ ಈ ಪ್ರಕರಣವನ್ನ ಎಸ್ ಐಟಿ ಗೆ ವಹಿಸಲಾಗಿದೆ, ಇಂದು ನಡೆಯುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ್ವರನ್ನು ಜೆಡಿಎಸ್ ನಿಂದ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ.

ಪ್ರಹ್ಲಾದ್ ಜೋಶಿ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಕೇಂದ್ರ ಸರ್ಕಾರ ಏಕೆ ತಡೆಯಲಿಲ್ಲ?: ಸಂತೋಷ್ ಲಾಡ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com