ವಿಜಯಪುರ: ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

ಈಜು ಬಾರದಿದ್ದರೂ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ವಿಜಯಪುರ: ಈಜು ಬಾರದಿದ್ದರೂ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮೃತ ಬಾಲಕರನ್ನು ಸೋಮಶೇಖರ್ ಆಲಮೇಲ(16) ಹಾಗೂ ಮಲಿಕ್ ನದಾಫ್(16) ಎಂದು ಗುರುತಿಸಲಾಗಿದೆ.

ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಈಜು ಬಾರದಿದ್ದರೂ ಈ ಬಾಲಕರು ಬಾವಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ
ರಾಮನಗರ: ಈಜಲು ತೆರಳಿದ್ದ ಬೆಂಗಳೂರು ಮೂಲದ ಐವರು ಕಾಲೇಜು ವಿದ್ಯಾರ್ಥಿಗಳು ನೀರು ಪಾಲು

ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com