
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ (RenukaSwamy Murder Case)ನಲ್ಲಿ ಬಂಧನಕ್ಕೀಡಾಗಿರುವ ನಟ ದರ್ಶನ್ (Actor Darshan)ಗೆ ಬೆಂಗಳೂರು ಕೋರ್ಟ್ ಮತ್ತೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿದೆ.
ಹೌದು.. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy case) ನಟ ದರ್ಶನ್ (Actor Darshan) ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿ ನ್ಯಾಯಾಲಯ ಗುರುವಾರ(ಆ.1ರಂದು) ಆದೇಶಿಸಿದ್ದು, ದರ್ಶನ್ ಅಂಡ್ ಗ್ಯಾಂಗ್ ಕೋರ್ಟ್ ಮತ್ತೆ 14 ದಿನ ಅಂದರೆ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ.
ನಟ ದರ್ಶನ್, ಪವಿತ್ರಾ ಗೌಡ (Pavitra Gowda) ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ಈ ಸಂಬಂಧ ಪೊಲೀಸರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯ ವಿಸ್ತರಣೆಯನ್ನು ಕೋರಿ ನ್ಯಾಯಾಧೀಶರ ಮುಂದೆ ರಿಮ್ಯಾಂಡ್ ಕಾಪಿಯನ್ನು ಸಲ್ಲಿಸಿ ಮನವಿ ಮಾಡಿತ್ತು.
ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಧೀಶ ವಿಶ್ವನಾಥ ಸಿ ಗೌಡರ್ ನೇತೃತ್ವದ ಪೀಠ ಆಗಸ್ಟ್ 14 ರವರೆಗೆ ವಿಸ್ತರಣೆ ಮಾಡಿ ಆದೇಶ ನೀಡಿದ್ದಾರೆ.
Advertisement