Prajwal Revanna ಸೆಕ್ಸ್ ಹಗರಣ: FSL ವರದಿ ಬಹಿರಂಗ, SIT ತನಿಖೆಗೆ ಹೊಸ ಆಯಾಮ!

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ಎಫ್‌ಎಸ್‌ಎಲ್‌ ವರದಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದ ವಿಡಿಯೊಗಳನ್ನು ಎಡಿಟ್‌ ಅಥವಾ ಮಾರ್ಫ್‌ ಮಾಡಿಲ್ಲ. ಯಾವುದೇ ರೀತಿಯಲ್ಲಿ ಎನಿಮೇಷನ್‌, ಗ್ರಾಫಿಕ್ಸ್‌ಗಳನ್ನು ಬಳಸಿಲ್ಲ ಎಂಬುದಾಗಿ ಎಫ್‌ಎಸ್‌ಎಲ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ.
FSL report on Prajwal Revannas Sex video
ಪ್ರಜ್ವಲ್ ರೇವಣ್ಣ
Updated on

ಬೆಂಗಳೂರು: ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಕುರಿತ ವಿಡಿಯೋಗಳು ಅಸಲಿ ಎಂದು ಎಫ್‌ಎಸ್‌ಎಲ್‌ ವರದಿಯಿಂದ ಸಾಬೀತಾಗಿದೆ ಎಂದು ತಿಳಿದುಬಂದಿದೆ.

ಹೌದು.. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ಎಫ್‌ಎಸ್‌ಎಲ್‌ ವರದಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದ ವಿಡಿಯೊಗಳನ್ನು ಎಡಿಟ್‌ ಅಥವಾ ಮಾರ್ಫ್‌ ಮಾಡಿಲ್ಲ. ಯಾವುದೇ ರೀತಿಯಲ್ಲಿ ಎನಿಮೇಷನ್‌, ಗ್ರಾಫಿಕ್ಸ್‌ಗಳನ್ನು ಬಳಸಿಲ್ಲ ಎಂಬುದಾಗಿ ಎಫ್‌ಎಸ್‌ಎಲ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದು ಎಸ್‌ಐಟಿ ತನಿಖೆಗೆ ಬಲ ಬಂದಂತಾಗಿದೆ.

ವಿಡಿಯೊಗಳನ್ನು ತಿರುಚಿಲ್ಲ ಎಂಬುದಾಗಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯು (FSL Report) ತಿಳಿಸಿದ್ದು, ಇದರಿಂದಾಗಿ ಪ್ರಕರಣದ ಕುರಿತು ಇನ್ನಷ್ಟು ತನಿಖೆ ನಡೆಸಲು ಎಸ್‌ಐಟಿಗೆ ಆನೆ ಬಲ ಬಂದಂತಾಗಿದೆ.

SIT ತನಿಖೆ ಚುರುಕು

ಎಸ್‌ಎಫ್‌ಎಲ್‌ ವರದಿ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ತನ್ನ ತನಿಖೆ ಚುರುಕುಗೊಳಿಸಿದೆ. ಈಗಾಗಲೇ ಎಫ್ ಎಸ್ ಎಲ್ ವರದಿ ಎಸ್ ಐಟಿ ಅಧಿಕಾರಿಗಳ ಕೈ ಸೇರಿದ್ದು, ಹೊಸ ಆಯಾಮದಲ್ಲಿ ತನಿಖೆ ನಡೆಸಲು ಅಧಿಕಾರಿಗಳು ತನಿಖೆ ನಡೆಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ವಿಡಿಯೋದಲ್ಲಿ ಪ್ರಜ್ವಲ್ ರೇವಣ್ಣ ಉಪಸ್ಥಿತಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊಗಳಲ್ಲಿ ಪುರುಷನ ಮುಖವನ್ನು ತೋರಿಸಿಲ್ಲ. ಹಾಗಾಗಿ, ಅಶ್ಲೀಲ ವಿಡಿಯೊದಲ್ಲಿರುವುದು ಪ್ರಜ್ವಲ್‌ ರೇವಣ್ಣ ಹೌದೋ, ಅಲ್ಲವೋ ಎಂಬುದು ಇದುವರೆಗೆ ದೃಢವಾಗಿಲ್ಲ. ಈಗ ವಿಡಿಯೊಗಳು ಅಸಲಿಯಾಗಿವೆ ಎಂಬುದು ಮಾತ್ರ ವರದಿಯಿಂದ ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಪ್ರಜ್ವಲ್‌ ರೇವಣ್ಣ ಹೌದೋ, ಅಲ್ಲವೋ ಎಂಬುದು ಕೂಡ ಬಯಲಾಗಲಿದೆ.

ಎಫ್‌ಎಸ್‌ಎಲ್‌ ವರದಿ ಬಳಿಕ ಎಸ್‌ಐಟಿ ಅಧಿಕಾರಿಗಳ ತನಿಖೆಯು ಚುರುಕುಗೊಂಡಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸುತ್ತಾರೆ. ಅದರಲ್ಲಿ, ಎಫ್‌ಎಸ್‌ಎಲ್‌ ವರದಿಯ ಕುರಿತು ಕೂಡ ಉಲ್ಲೇಖಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

FSL report on Prajwal Revannas Sex video
ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ರೇವಣ್ಣ, ಭವಾನಿ ರೇವಣ್ಣಗೂ ಸಂಕಷ್ಟ

ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯ ಅಪಹರಣ ಮಾಡಿದ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲು ಸೇರಿದ್ದರು. ಅವರು ಈಗ ಜಾಮೀನು ಪಡೆದು ಹೊರಬಂದಿದ್ದಾರೆ. ಇದೇ ಪ್ರಕರಣವು ಎಚ್‌.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ಮುಳುವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com