ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನ ಚಾಲಕರ ಅಜಾಗರೂಕತೆ, ನಿರ್ಲಕ್ಷ್ಯ ಮತ್ತು ಅತಿವೇಗದಿಂದ ಹಲವಾರು ಗಂಭೀರ ಮತ್ತು ಮಾರಣಾಂತಿಕ ಅಪಘಾತಗಳು ಸಂಭವಿಸಿರುವುದರಿಂದ ರಸ್ತೆ ಬಳಕೆದಾರರ ಸುರಕ್ಷತೆಯ ಹಿತದೃಷ್ಟಿಯಿಂದ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬೆಂಗಳೂರು ಸಂಚಾರಿ ಪೊಲೀಸರ ಪ್ರಕಾರ, ಚಾಲಕನ ಆಸನದ ಜೊತೆಗೆ (M1 ವರ್ಗದ ವಾಹನಗಳು) ಹೆಚ್ಚುವರಿಯಾಗಿ ಎಂಟು ಆಸನಗಳನ್ನು ಒಳಗೊಂಡಿರುವ ಪ್ರಯಾಣಿಕರ ಸಾಗಣೆಗೆ ಬಳಸುವ ವಾಹನಗಳಿಗೆ ವೇಗದ ಮಿತಿಯನ್ನು ಗಂಟೆಗೆ 120 ಕಿ.ಮೀ. ಎಂದು ನಿಗದಿಪಡಿಸಲಾಗಿದೆ.
ಚಾಲಕನ ಆಸನದ ಜೊತೆಗೆ ಒಂಬತ್ತು ಅಥವಾ ಅದಕ್ಕಿಂತ ಹೆಚ್ಚಿನ ಆಸನಗಳನ್ನು ಹೊಂದಿರುವ ಮೋಟಾರು ವಾಹನಗಳಿಗೆ ಗಂಟೆಗೆ 100 ಕಿ.ಮೀ ಮತ್ತು ಸರಕು ಸಾಗಣೆಗೆ ಬಳಸುವ ಮೋಟಾರ್‌ಸೈಕಲ್‌ಗಳು ಮತ್ತು ವಾಹನಗಳ ವೇಗದ ಮಿತಿಯನ್ನು ಗಂಟೆಗೆ 80 ಕಿಮೀ ಎಂದು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.
ಇದಲ್ಲದೇ ನೈಸ್ ರಸ್ತೆಯಲ್ಲಿ ಎಲ್ಲಾ ದಿನ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳನ್ನು ಬಳಸದಂತೆ ಪೊಲೀಸರು ನಿರ್ಬಂಧ ಹೇರಿದ್ದು, ಆಗಸ್ಟ್ 2 ರಿಂದ ಈ ನಿರ್ಬಂಧಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
Advertisement