
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ರೈಲಿಗೆ ತಲೆ ಕೊಟ್ಟು ಅಣ್ಣ ಹಾಗೂ ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಶುಕ್ರವಾರ ನಡೆದಿದೆ.
ಬೆಂಗಳೂರಿನಿಂದ ಚಿಕ್ಕಬಳ್ಳಾಪುರ - ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುತ್ತಿದ್ದ ರೈಲಿಗೆ ರಾತ್ರಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗ್ಗೆ ರೈಲ್ವೆ ಹಳಿ ಮೇಲೆ ಅಣ್ಣ, ತಂಗಿಯ ರುಂಡ ಬೇರೆ, ಬೇರೆಯಾಗಿರುವ ಶವ ಪತ್ತೆಯಾಗಿದೆ.
ಮೃತರನ್ನು ಪ್ರಭು(25) ಹಾಗೂ ನವ್ಯ(23) ಎಂದು ಗುರುತಿಸಲಾಗಿದೆ. ಇವರು ಅಣ್ಣ, ತಂಗಿಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಪ್ರೇಮನಗರ ನಿವಾಸಿಗಳು ಎನ್ನಲಾಗಿದೆ.
ಇತ್ತೀಚೆಗೆ ಪ್ರಭು ಹಾಗೂ ನವ್ಯ ಅವರ ತಾಯಿ ತೀರಿಕೊಂಡಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಅಣ್ಣ, ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement