Shiradi Ghat: "90 ಡಿಗ್ರಿಯಲ್ಲಿ ಗುಡ್ಡಗಳಿಗೆ ಕತ್ತರಿ, ಅವೈಜ್ಞಾನಿಕ ಕಾಮಗಾರಿ"; ಅಧಿಕಾರಿಗಳ ವಿರುದ್ಧ ಸಿಎಂ ಗರಂ!

ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಸ್‌ಡಿಆರ್‌ಎಫ್‌ ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು. ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ‌ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು.
CM Siddaramaiah in Shiradighat Landslide Area
ಶಿರಾಡಿಘಾಟ್ ಭೂಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
Updated on

ಮಡಿಕೇರಿ: ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಲಾಗಿದೆ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು.. ಶಿರಾಡಿಘಾಟ್ ಭೂಕುಸಿತ ಪ್ರದೇಶಕ್ಕೆ ಇಂದು ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವೈಜ್ಞಾನಿಕ ಕಾಮಗಾರಿ ಕಂಡ ಆಘಾತಗೊಂಡರು. ಅಲ್ಲದೆ ಸ್ಥಳದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು.

ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು, ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಕಾಮಗಾರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಸ್‌ಡಿಆರ್‌ಎಫ್‌ ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು. ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ‌ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು.

ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಗೊಳಿಸಿಕೊಳ್ಳುವುದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ?, ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ? ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು.

ಅಲ್ಲದೆ ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಎಕ್ಸ್ ನಲ್ಲಿ ಮಾಹಿತಿ

ಇನ್ನು ಭೇಟಿ ಬಳಿಕ ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ''ಶಿರಾಡಿ ಘಾಟ್ ಗುಡ್ಡ ಕುಸಿತದ ಸ್ಥಳಕ್ಕೆ ಇಂದು ಭೇಟಿನೀಡಿ, ಸ್ಥಳ ಪರಿಶೀಲನೆ ನಡೆಸುವ ವೇಳೆ ಅವೈಜ್ಞಾನಿಕ ಕಾಮಗಾರಿ ಕಂಡುಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಿದೆ. ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದೇ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.

ಒಟ್ಟು 45 ಕಿಮೀ ನಲ್ಲಿ 35 ಕಿಮೀ ಹೆದ್ದಾರಿ ಕಾಮಗಾರಿ ಮುಗಿದಿದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಲಾಗಿದೆ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತು. ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ವಹಿಸಬೇಕಿತ್ತು. ಇಲ್ಲಿನ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಸರ್ಕಾರದಿಂದ ಪತ್ರ ಬರೆಯುತ್ತೇವೆ. ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ನಾವು ಇಂತಹ ವರ್ತನೆಯನ್ನು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

CM Siddaramaiah in Shiradighat Landslide Area
ಸಂಪುಟ ಸಭೆಯಲ್ಲಿ ಕಸ್ತೂರಿರಂಗನ್ ವರದಿ ಚರ್ಚೆ, ಮಳೆ ಅನಾಹುತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ: ಸಿಎಂ ಸಿದ್ದರಾಮಯ್ಯ

ಶಾಲಿನಿ ರಜನೀಶ್ ಮಾಹಿತಿ

ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂಗೆ ವಿವರಿಸುತ್ತಾ, “ಒಟ್ಟು 45 ಕಿ.ಮೀನಲ್ಲಿ 35 ಕಿ.ಮೀ ಹೈವೇ ಕಾಮಗಾರಿ ಮುಗಿದಿದೆ. 10 ಕಿ.ಮೀ ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ” ಎಂದು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com