ಪಿಎಸ್ಐ ಪರಶುರಾಮ್ ಸಾವು ಪ್ರಕರಣ: ಶಾಸಕ ಚನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ FIR

ಶಾಸಕ ಪಾಟೀಲ್ ನಂಬರ್ 1 ಮತ್ತು ಅವರ ಪುತ್ರ ಎರಡನೇ ಆರೋಪಿಯಾಗಿದ್ದಾರೆ. ಪರುಶರಾಮ್ ಅವರ ಪತ್ನಿ ಎನ್. ವಿ. ಶ್ವೇತಾ ದಾಖಲಿಸಿರುವ ದೂರಿನ ಮೇರೆಗೆ ಶಾಸಕ ಮತ್ತು ಅವರ ಪುತ್ರನ ವಿರುದ್ಧ ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನ, ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಪಿಎಸ್ ಐ ಪರಶುರಾಮ್
ಪಿಎಸ್ ಐ ಪರಶುರಾಮ್
Updated on

ಬೆಂಗಳೂರು: ಯಾದಗಿರಿಯ ಪಿಎಸ್ ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಶಾಸಕ ಪಾಟೀಲ್ ನಂಬರ್ 1 ಮತ್ತು ಅವರ ಪುತ್ರ ಎರಡನೇ ಆರೋಪಿಯಾಗಿದ್ದಾರೆ. ಪರುಶರಾಮ್ ಅವರ ಪತ್ನಿ ಎನ್. ವಿ. ಶ್ವೇತಾ ದಾಖಲಿಸಿರುವ ದೂರಿನ ಮೇರೆಗೆ ಶಾಸಕ ಮತ್ತು ಅವರ ಪುತ್ರನ ವಿರುದ್ಧ ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನ, ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಪತಿ ಯಾದಗಿರಿ ಠಾಣೆಯಲ್ಲಿಯೇ ಮುಂದುವರಿಯಲು ತಂದೆ-ಮಗ 30 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು ಎಂದು ಅವರು ಆರೋಪಿಸಿದ್ದಾರೆ. ಪರಶುರಾಮ್ ವರ್ಗಾವಣೆಯಾದಾಗಿನಿಂದ ಕಣ್ಣೀರು ಹಾಕುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದರು. ಮಗುವಿನ ಹೆರಿಗೆಗಾಗಿ ರಾಯಚೂರಿಗೆ ಪೋಷಕರ ಮನೆಗೆ ಹೋದಾಗ ಪರಶುರಾಮ್ ಮೂಗು ಮತ್ತು ಬಾಯಿಯಿಂದ ರಕ್ತಸ್ರಾವವಾಗಿ ಆಸ್ಪತ್ರೆಗೆ ದಾಖಲಾಗಿರುವುದು ತಿಳಿಯಿತು ಎಂದು ಶ್ವೇತಾ ಹೇಳಿದ್ದಾರೆ.

ಘಟನೆಯ ನಂತರ ದಲಿತ ಸಂಘರ್ಷ ಸಮಿತಿ ಸದಸ್ಯರು ಪರಶುರಾಮ್‌ಗೆ ನ್ಯಾಯಕ್ಕಾಗಿ ಒತ್ತಾಯಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಶ್ವೇತಾ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಸಕರನ್ನು ಬೆಂಬಲಿಸುವ ಪೊಲೀಸರು ನನ್ನ ಪತಿಯನ್ನು ಬೆಂಬಲಿಸಲಿಲ್ಲ. ಹಣಕ್ಕಾಗಿ ಪೀಡಿಸಿದವರನ್ನು ಬೆಂಬಲಿಸುವ ಪೊಲೀಸರು ಶಾಸಕರನ್ನು ಬೆಳೆಸುತ್ತೀರಾ? ಶಾಸಕರಿಗಾಗಿ ನಿಮ್ಮ ತಂದೆ-ತಾಯಿ ಮತ್ತು ಕುಟುಂಬವನ್ನು ಕಡೆಗಣಿಸಿ ಹಗಲಿರುಳು ಶ್ರಮಿಸುತ್ತೀರಾ? ಅದಕ್ಕೆ ಈ ಶಾಸಕರೇ ಕಾರಣವಾಗಿದ್ದರೂ ಇಲ್ಲಿಯವರೆಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಶ್ವೇತಾ, ತನಗೆ ನ್ಯಾಯ ಬೇಕು ಎಫ್ ಐಆರ್ ದಾಖಲಿಸಬೇಕು ಎಂದು ಪಟ್ಟು ಹಿಡಿದರು. ಪ್ರತಿಭಟನೆಯಿಂದಾಗಿ ಸ್ವಲ್ಪ ಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಪಿಎಸ್ ಐ ಪರಶುರಾಮ್
ಯಾದಗಿರಿ: ಮೊನ್ನೆಯಷ್ಟೇ ವರ್ಗಾವಣೆಗೊಂಡಿದ್ದ PSI ಪರಶುರಾಮ್ ಹಠಾತ್ ಸಾವು; ಶಾಸಕ ಚೆನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ

ಈ ಮಧ್ಯೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ.ಪರಮೇಶ್ವರ್ ,ಈ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದರು.

35 ವರ್ಷದ ಎಸ್ ಐ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಡೆತ್‌ನೋಟ್ ಬರೆದಿಟ್ಟಿಲ್ಲ‌. ವರ್ಗಾವಣೆ ವಿಚಾರಕ್ಕೆ ನೊಂದಿದ್ದರು ಎಂದು ಆತನ ಪತ್ನಿ ದೂರು ಕೊಟ್ಟಿದ್ದಾರೆ. ಅವರ ಆರೋಪವನ್ನು ಪರಿಗಣಿಸಿದ್ದು, ಆ ಆಯಾಮದಲ್ಲಿಯು ತನಿಖೆ ನಡೆಯಲಿದೆ. ಪ್ರಾಥಮಿಕ‌ ಮಾಹಿತಿ ಕಲೆ ಹಾಕುತ್ತಿದ್ದಾರೆ.‌ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸ್ಥಳೀಯ ಶಾಸಕರಿಗೆ ಹಣ ಕೊಟ್ಟಿದ್ದರು ಎಂಬ ಆರೋಪವನ್ನು ಸರಿ ಅಥವಾ ಇಲ್ಲ ಅಂತ ಹೇಳಲು ಬರುವುದಿಲ್ಲ. ತನಿಖೆ ನಡೆಸಿದ ನಂತರ ಸತ್ಯಾಂಶ ಹೊರಬರಲಿದೆ. ನಾನು ಸಮುದಾಯ ಯಾವುದು ಎಂಬುದನ್ನು ನೋಡುವುದಿಲ್ಲ. ಕಾನೂನನ್ನು ನೋಡುತ್ತೇನೆ. ಆ ರೀತಿಯ ಘಟನೆ‌ ನಡೆದಾಗ ಎಫ್‌ಐಆರ್ ಹಾಕಿಕೊಳ್ಳಬೇಕು. ಎಫ್‌ಐಆರ್ ದಾಖಲಿಸುವ ಮುನ್ನ ಪರಿಶೀಲನೆ ನಡೆಸುತ್ತಾರೆ. ಶಾಸಕರು ಇದ್ದರು ಅಥವಾ ಬೇರೆಯವರಿದ್ದರು, ಆಡಳಿತ ಪಕ್ಷದ ಶಾಸಕರಾಗಿದ್ದರು ಸಹ ಎಫ್ಐಆರ್ ದಾಖಲಿಸುತ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com