
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ಬ್ಲಾಕ್‌ಮೇಲರ್ ಎಂದು ಕರೆದಿದ್ದಕ್ಕಾಗಿ ಲೀಗಲ್ ನೋಟಿಸ್ ಜಾರಿ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಶುಕ್ರವಾರ ಹೇಳಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೈಸೂರಿನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದ ಮುಂದೆ ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆದಿದ್ದಾರೆ. ಈ ಹೇಳಿಕೆಯಿಂದ ನನಗೆ ನೋವಾಗಿದೆ ಮತ್ತು ಮಾನಹಾನಿಯಾಗಿದೆ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರೇ ನಿಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದೇನೆ. ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ ಮತ್ತು ಸಾರ್ವಜನಿಕ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾನು ನಿಮ್ಮ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸುತ್ತೇನೆ" ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸುದೀರ್ಘವಾದ ಲೀಗಲ್ ನೋಟೀಸ್ ನೀಡಿರುವ ಅಬ್ರಾಹಂ ಅವರು ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಸಿಎಂ ಕುಟುಂಬದ ವಿರುದ್ಧ ಮೂಡ ಹಗರಣದ ಕುರಿತು ಮಾಹಿತಿ ನೀಡಿದ್ದಾರೆ. ಜತೆಗೆ ಸಿಎಂ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
ರಾಹುಲ್ ಗಾಂಧಿ ಅವರು ಮೋದಿ ಎಂಬ ಸರ್‌ನೇಮ್ ಬಳಸಿದಕ್ಕೆ ಅವರ ಮೇಲೆ ಕ್ರಿಮಿನಲ್ ಮಾನಹಾನಿ ಕೇಸ್ ಹಾಕಿದ್ದರು. ಆ ಕೇಸ್‌ನ ಬಗ್ಗೆಯೂ ಟಿಜೆ ಅಬ್ರಾಹಂ ಅವರು ನೋಟೀಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕೆಂದು ಟಿಜೆ ಅಬ್ರಾಹಂ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂಗೆ ಏಳು ದಿನಗಳಲ್ಲಿ ಉತ್ತರಿಸುವಂತೆ ಶೋಕಸ್ ನೋಟಿಸ್ ನೀಡಿದ್ದದಾರೆ. ಇದರಿಂದ ಅಬ್ರಾಹಂ ವಿರುದ್ಧ ಕೋಪಗೊಂಡಿರುವ ಸಿದ್ದರಾಮಯ್ಯ, ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಟಿಜೆ ಅಬ್ರಾಹಂ ಬ್ಲಾಕ್ ಮೈಲರ್ ಎಂದಿದ್ದಾರೆ. ಇದರಿಂದ ಕೋಪಗೊಂಡಿರುವ ಟಿಜೆ ಅಬ್ರಹಾಂ, ಹೇಳಿಕೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಲೀಗಲ್ ನೋಟಿಸ್ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ಎಂದು ಟಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಟಿಜೆ ಅಬ್ರಹಾಂ ನೀಡಿರುವ ದೂರೇ ಇದೀಗ ಸಿದ್ದರಾಮಯ್ಯಗೆ ಮಾತ್ರವಲ್ಲ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಕಂಟಕ ಎದುರಾಗಿದೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಅವರು ಅರ್ಜಿ ಸಲ್ಲಿಸಿದ್ದು, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ರಾಜ್ಯಪಾಲರು ನೋಟಿಸ್ ಹಿಂಪಡೆಯುವಂತೆ ಹಾಗೂ ಅಬ್ರಹಾಂ ಅವರ ಅರ್ಜಿಯನ್ನು ತಿರಸ್ಕರಿಸುವಂತೆ ಗುರುವಾರ ಸಚಿವ ಸಂಪುಟ ನಿರ್ಣಯವನ್ನು ಅಂಗೀಕರಿಸಿತು.
Advertisement