ಯಾದಗಿರಿ: ಮೊನ್ನೆಯಷ್ಟೇ ವರ್ಗಾವಣೆಗೊಂಡಿದ್ದ PSI ಪರಶುರಾಮ್ ಹಠಾತ್ ಸಾವು; ಶಾಸಕ ಚೆನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ

ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಪಿಎಸ್ ಐ ಪರಶುರಾಮ್
ಪಿಎಸ್ ಐ ಪರಶುರಾಮ್
Updated on

ಯಾದಗಿರಿ: ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರುವಾಗಿದ್ದು, ಯಾದಗಿರಿ ನಗರದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಗರದ ಖಾಸಗಿ ಆಸ್ಪತ್ರೆ ಬಳಿ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದ್ದು ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ದಲಿತ ಸಂಘಟನೆಗಳು ಆಗ್ರಹಿಸಿವೆ. ಅಷ್ಟೇ ಅಲ್ಲದೇ ಪರಶುರಾಮ್‌ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಮತ್ತು ಪುತ್ರ ಸನ್ನಿಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಪಿಎಸ್ ಐ ಪರಶುರಾಮ್
ಸಮವಸ್ತ್ರದಲ್ಲಿರುವಾಗ ರೀಲ್ಸ್ ಮಾಡದಂತೆ ಪೊಲೀಸ್ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಆಯುಕ್ತ ಎಚ್ಚರಿಕೆ

ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಬೇಡಿಕೆ ಇಟ್ಟಿದ್ದರು. ಈಗ ನಿಯಮಬಾಹಿರವಾಗಿ ಅವರನ್ನು ವರ್ಗಾವಣೆ ಮಾಡಿದ್ದರಿಂದ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಭಾರೀ ಒತ್ತಡದಿಂದ ಅವರಿಗೆ ಹೃದಯಾಘಾತವಾಗಿದೆ. ಯಾದಗಿರಿ ಶಾಸಕರಿಗೆ ಹಣದ ಆಸೆ ಬಹಳಷ್ಟಿದೆ. ಪರಶುರಾಮ್‌ ಅವರ ಜಾಗಕ್ಕೆ ಬೇರೊಬ್ಬರು ಬಂದರೂ ವರ್ಗಾವಣೆ ಪಟ್ಟಿಯಲ್ಲಿ ಪರಶುರಾಮ್‌ ಹೆಸರೇ ಇರಲಿಲ್ಲ. ಈಗ ಹೊಸದಾಗಿ ಬಂದವರು ಹಣ ನೀಡಿಯೇ ಬಂದಿದ್ದಾರೆ ಎಂದು ಮಾವ ವೆಂಕಟಸ್ವಾಮಿ ಮತ್ತು ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದಾರೆ.

ಪರಶುರಾಮ್‌ ಅವರು ಪಿಎಸ್‌ಐ ಹುದ್ದೆ ಪಡೆಯಲು 30 ಲಕ್ಷ ರೂ. ನೀಡಿದ್ದರು. ಈ ಹುದ್ದೆ ಪಡೆಯಲು ಬಹಳ ಸಾಲ ಮಾಡಿದ್ದರು. ಈಗ ಮತ್ತೆ ನಿಯಮಬಾಹಿರವಾಗಿ ಒಂದು ವರ್ಷ ಪೂರೈಸುವ ಮುನ್ನವೇ ಅವರನ್ನು ಯಾದಗಿರಿಯ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿದ್ದರಿಂದ ಖಿನ್ನತೆಗೆ ಜಾರಿದ್ದರು. ಈ ಕಾರಣದಿಂದ ಹೃದಯಾಘಾತವಾಗಿ ಮೃತಪಟ್ಟಿರಬಹುದು ಎಂಬ ಮಾತು ಕೇಳಿ ಬರುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com