ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ವಿರುದ್ಧ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (KPMTCC) ಸಿಎಂ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.
ಇಲಾಖೆ ಅಧಿಕಾರಿಗಳು ಬೇರೆ ಬೇರೆ ಆಧಾರದಲ್ಲಿ ಶಾಲೆಗಳಿಂದ ಹಣ ವಸೂಲಿ ಮಾಡುತ್ತಿದ್ದು, ನಾನಾ ಕಡೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ.
ಸಮನ್ವಯ ಸಮಿತಿ ಸಂಚಾಲಕ ಶಶಿಕುಮಾರ್ ಡಿ, ಶಿಕ್ಷಣದ ಕೆಲವು ನಿರ್ಣಾಯಕ ಅಂಶಗಳ ಬಗ್ಗೆ ಸರ್ಕಾರವು ನಿರ್ಧರಿಸುತ್ತಿರುವ ರೀತಿ ನಮಗೆ ಸಮಾಧಾನವಿಲ್ಲ. ಅಧಿಕಾರಿಗಳು ಕೂಡ ಬೇರೆ ಬೇರೆ ಕಾರಣಗಳಿಗಾಗಿ ಶಾಲೆಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ ಎಂದರು.
ಈ ಹಿಂದೆಯೂ ಸಮಿತಿ, ಖಾಸಗಿ ಶಾಲೆಗಳಲ್ಲಿನ ವಿವಿಧ ಬೋರ್ಡ್‌ಗಳ ಮಾನ್ಯತೆ ಮತ್ತು ಅನಧಿಕೃತ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಇಲಾಖೆಯು ಇಚ್ಛಿಸದಿರುವ ಅಕ್ರಮಗಳನ್ನು ಬಯಲಿಗೆಳೆದಿತ್ತು, ಅಧಿಕೃತ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಸಮಿತಿ ಮತ್ತು ಪೋಷಕರು ಎತ್ತಿದ ಮತ್ತೊಂದು ಸಮಸ್ಯೆಯೆಂದರೆ 6,8 ಮತ್ತು 9 ನೇ ತರಗತಿಗಳಂತಹ ಕೆಳ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದು. ಪೋಷಕರು ಮತ್ತು ಸಂಬಂಧಪಟ್ಟವರು ಸರ್ಕಾರವು ಎನ್‌ಸಿಇಆರ್‌ಟಿಗೆ ಅನುಗುಣವಾಗಿ ಪಠ್ಯಕ್ರಮವನ್ನು ಪ್ರಮಾಣೀಕರಿಸಬೇಕು ಎಂದು ಒತ್ತಾಯಿಸಿದ್ದಾರೆ.
Advertisement