KAS ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಘೋಷಿಸಿದ KPSC

ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಬೇಕಿತ್ತು.
KPSC
ಕೆಪಿಎಸ್ ಸಿ online desk
Updated on

ಬೆಂಗಳೂರು: ಆ.25 ಕ್ಕೆ ನಿಗದಿಯಾಗಿದ್ದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕ ಮುಂದೂಡಿಕೆಯಾಗಿದೆ. ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಬೇಕಿತ್ತು.

ಆದರೆ ಇದೇ ದಿನದಂದು ಬ್ಯಾಂಕಿಂಗ್ ಪರೀಕ್ಷೆಯೂ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೆಎಎಸ್ ಅಭ್ಯರ್ಥಿಗಳು ಪರೀಕ್ಷೆ ದಿನಾಂಕ ಮುಂದೂಡುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ್ದ ಸಿಎಂ ಸಿದ್ದರಾಮಯ್ಯ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಕೆಪಿಎಸ್‌ಸಿಗೆ ಸೂಚಿಸಿದ್ದರು.

KPSC
KPSC ಸದಸ್ಯತ್ವ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: ನಾಲ್ವರ ಬಂಧನ

ಅದರಂತೆ ಇದೀಗ ಆಗಸ್ಟ್​ 25ರ ಬದಲಾಗಿ ಆ.27 (ಮಂಗಳವಾರ) ರಂದು ನಡೆಸಲು ತೀರ್ಮಾನಿಸಲಾಗಿದೆ. ಆ.25ರಂದು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಈಗಾಗಲೇ ಒಟ್ಟು 564 ಪರೀಕ್ಷಾ ಉಪಕೇಂದ್ರಗಳಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com