Bengaluru Rain: BMTC ಎಲೆಕ್ಟ್ರಿಕ್ ಬಸ್ ಗೆ ಬೆಂಕಿ, ಪ್ರಯಾಣಿಕರು ಪಾರು, ಕಾರಣ ನೀರು!

ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ (Heavy Rain) ಸರ್ವೀಸ್ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.
BMTC electric bus catches Fire in Bengaluru
ಎಲೆಕ್ಟ್ರಿಕ್ ಬಸ್ ಗೆ ಬೆಂಕಿ
Updated on

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ನಾನಾ ಅವಾಂತರಕ್ಕೆ ಕಾರಣವಾಗುತ್ತಿದ್ದು ಇದೀಗ ಇದೇ ಮಳೆ ಕಾರಣದಿಂದಾಗಿ BMTC ಎಲೆಕ್ಟ್ರಿಕ್ ಬಸ್ ವೊಂದು ಬೆಂಕಿಗಾಹುತಿಯಾಗಿದೆ.

ಅಚ್ಚರಿಯಾದರೂ ಸತ್ಯ.. ನಾಗವಾರ - ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ನಿನ್ನೆ ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ (Electric Bus) ಬೆಂಕಿಗಾಹುತಿಯಾಗಿದೆ.

ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ (Heavy Rain) ಸರ್ವೀಸ್ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.

ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಸಾಧ್ಯತೆ

ಇನ್ನು ಸರ್ವೀಸ್ ರಸ್ತೆಯಲ್ಲಿ ತುಂಬಿದ್ದ ನೀರಿನಲ್ಲಿ ಹೋಗುತ್ತಿದ್ದ ವೇಳೆ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನ ಇಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅಗ್ನಿಶಾಮಕ ವಾಹನ ಸ್ಥಳಕ್ಕೆ ತಲುಪುವ ವೇಳೆಗೆ ಬಸ್ ಬೆಂಕಿಗಾಹುತಿಯಾಗಿದೆ.

ನಂತರ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಸ್ ಏಕಾಏಕಿ 2 ಅಡಿ ಉದ್ಧದ ನೀರಿನಲ್ಲಿ ಬಸ್ ಚಲಾಸಿದ್ದರಿಂದ ಅದರ ಎಲೆಕ್ಟ್ರಾನಿಕ್ ಯಂತ್ರಗಳಿಗೆ ನೀರು ನುಗ್ಗಿದ್ದು ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವ ಸಾಧ್ಯತೆ ಇದೆ. ಹೀಗಾಗಿ ಬಸ್ ಗೆ ಬೆಂಕಿ ಹೊತ್ತಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

BMTC electric bus catches Fire in Bengaluru
ಗುಡುಗು ಸಹಿತ ಮಳೆ: ಬೆಂಗಳೂರಿನ ಹಲವೆಡೆ ಜನಜೀವನ ಅಸ್ತವ್ಯಸ್ತ

ಪ್ರಸ್ತುತ ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com