ಬೆಂಗಳೂರು: ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 19 ವರ್ಷದ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಳನ್ನು ಅತುಲ್ಯ ಜಿ ಎಂದು ಗುರುತಿಸಲಾಗಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಅತುಲ್ಯ ಚಿಕ್ಕಬಾಣಾವರದ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಪ್ಯಾರಪೆಟ್ ಮೇಲೆ ಕುಳಿತು ಪೋಷಕರೊಂದಿಗೆ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಆಕೆ ಬಿದ್ದಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು ಎಂದು ಅವರು ಹೇಳಿದರು.
ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇದು ಆಕಸ್ಮಿಕ ಸಾವು ಅಥವಾ ಆತ್ಮಹತ್ಯೆಯೇ ಎಂದು ಖಚಿತಪಡಿಸಿಕೊಳ್ಳಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement