ಕೋಲಾರ: ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ, ವಧು ಸಾವು!

27 ವರ್ಷದ ನವೀನ್ ಹಾಗೂ 20 ವರ್ಷದ ಲಿಖಿತ ಅವರು ಇಂದು ಸಪ್ತಪದಿ ತುಳಿದಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಅದೇನಾಯ್ತೋ ಏನೋ ರೂಮ್​ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ.
ಕೋಲಾರ: ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ, ವಧು ಸಾವು!
Updated on

ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ಬುಧವಾರ ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಪರಸ್ಪರ ಹೊಡೆದಾಡಿಕೊಂಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಮತ್ತು ವರನ ಸ್ಥಿತಿ ಗಂಭೀರವಾಗಿದೆ.

27 ವರ್ಷದ ನವೀನ್ ಹಾಗೂ 20 ವರ್ಷದ ಲಿಖಿತ ಅವರು ಇಂದು ಸಪ್ತಪದಿ ತುಳಿದಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಅದೇನಾಯ್ತೋ ಏನೋ ರೂಮ್​ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಅವರು ಸಾವನ್ನಪ್ಪಿದ್ದಾರೆ.

ನವೀನ್ ಹಾಗೂ ಲಿಖಿತಾ ಇಬ್ಬರು ಇಂದು ಬೆಳಗ್ಗೆ ಮದುವೆಯಾಗಿದ್ದು, ನಂತರ ಇಬ್ಬರೂ ಜಗಳವಾಡಿದ್ದಾರೆ. ಕೋಪದ ಭರದಲ್ಲಿ ನವೀನ್, ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬಳಿಕ ಅದೇ ಚಾಕುವಿನಿಂದ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ತಿಳಿಸಿದ್ದಾರೆ.

ಕೋಲಾರ: ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ, ವಧು ಸಾವು!
ಕೋಲಾರ: ಆಡಿ ಕಾರು ಮರಕ್ಕೆ ಡಿಕ್ಕಿ, ಮೂವರು ವಿದ್ಯಾರ್ಥಿಗಳು ಸಾವು

ಗಂಭೀರವಾಗಿ ಗಾಯಗೊಂಡಿರುವ ವರ ನವೀನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.

ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದ ನವೀನ್ ಕೆಲವು ವರ್ಷಗಳಿಂದ ಆಂಧ್ರಪ್ರದೇಶದ ಬೈನಪಲ್ಲಿ ಗ್ರಾಮದ ಲಿಖಿತ ಅವರನ್ನು ಪ್ರೀತಿಸುತ್ತಿದ್ದ. ಇಬ್ಬರೂ ಸೇರಿ ಕಷ್ಟಪಟ್ಟು ಮನೆಯವರನ್ನು ಒಪ್ಪಿಸಿ ಗ್ರಾಮದಲ್ಲಿ ಸರಳವಾಗಿ ಮದುವೆಯನ್ನೂ ಮಾಡಿಕೊಂಡಿದ್ದಾರೆ. ಬೆಳಗ್ಗೆ ಮದುವೆಯಾದ ಜೋಡಿ ಎಲ್ಲ ಮದುವೆ ಶಾಸ್ತ್ರಗಳು ಮುಕ್ತಾಯಗೊಂಡ ನಂತರ ಒಂದು ಕೋಣೆಯಲ್ಲಿ ಹೋಗಿದ್ದಾರೆ. ಕೆಲ ಹೊತ್ತಿನ ನಂತರ ಕೊಠಡಿಯಲ್ಲಿದ್ದ ಹುಡುಗ ಹುಡುಗಿ ಜಗಳ ಮಾಡಿಕೊಂಡಿದ್ದಾರೆ.

ಮದ್ವೆಯಾಗಿ ಇನ್ನೇನು ಸುಖವಾಗಿ ಸಂಸಾರ ಸಾಗಿಸಬೇಕಿದ್ದ ವಧು ದುರಂತ ಅಂತ್ಯಕಂಡಿದ್ದರೆ, ವರ ನವೀನ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com