ವಾಲ್ಮೀಕಿ ಹಗರಣ: ಸಿಬಿಐ ತನಿಖೆಗೆ ಆಕ್ಷೇಪಣೆ ಸಲ್ಲಿಸಲಿದೆ ರಾಜ್ಯ ಸರ್ಕಾರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸಿಬಿಐ ತನಿಖೆ ಕೋರಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲಾಗುವುದು ಎಂದು ಕರ್ನಾಟಕ ಸರ್ಕಾರಿ ವಕೀಲರು ಬುಧವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸಿಬಿಐ ತನಿಖೆ ಕೋರಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದೆ. ಈ ಸಂಬಂಧ ಬ್ಯಾಂಕ್ ರಿಟ್ ಅರ್ಜಿ ಸಲ್ಲಿಸಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದೆ.

ಪೊಲೀಸರು ತನಿಖೆ ನಡೆಸುತ್ತಿದ್ದು, ಇದು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ವಾಲ್ಮೀಕಿ ಹಗರಣ: 3,072 ಪುಟಗಳ SIT ಆರೋಪ ಪಟ್ಟಿ ಸಲ್ಲಿಕೆ; ನಾಗೇಂದ್ರ-ದದ್ದಲ್ ಹೆಸರಿಲ್ಲ!

ನಾವು ಒಂದು ವಾರದಲ್ಲಿ ಬ್ಯಾಂಕ್‌ನ ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸುತ್ತೇವೆ. ಚಾರ್ಜ್ ಶೀಟ್‌ನಲ್ಲಿ ಬ್ಯಾಂಕ್ ಅಧಿಕಾರಿಗಳ ಹೆಸರನ್ನು ಎಸ್‌ಐಟಿ ಸೇರಿಸಿಲ್ಲ. ಪ್ರಕರಣ ರದ್ದು ಕೋರಿದ ಬ್ಯಾಂಕ್ ಅಧಿಕಾರಿಗಳ ಅರ್ಜಿ ಮುಕ್ತಾಯಗೊಳಿಸಬೇಕು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿದರು.

ಬ್ಯಾಂಕ್ ಪರವಾಗಿ ವಾದ ಮಂಡಿಸಿದ ಭಾರತದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು, 50 ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ಹಗರಣವಿದ್ದರೆ ಸಿಬಿಐ ತನಿಖೆ ನಡೆಸಬೇಕು. ಸಿಬಿಐಗೆ ಮಾತ್ರ ಬ್ಯಾಂಕ್ ಕೇಸ್​ಗಳ ತನಿಖೆಗೆ ಅಧಿಕಾರವಿದೆ. ಬ್ಯಾಂಕ್ ಅಧಿಕಾರಿಗಳಲ್ಲದೆ ಇತರರನ್ನೂ ಸಿಬಿಐ ತನಿಖೆಗೆ ಒಳಪಡಿಸಬಹುದು. ಆದರೆ, ಸಿಬಿಐ ಅಧಿಕಾರ ವ್ಯಾಪ್ತಿಯಲ್ಲಿ ಎಸ್ಐಟಿ ತನಿಖೆ ನಡೆಸುವಂತಿಲ್ಲ ಎಂದು ಹೇಳಿದರು.

ವಾದ ಮತ್ತು ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು, ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com