ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

ಇಡಿ ವಿರುದ್ಧ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ಗೆ ಕೋರ್ಟ್​ ಸಮನ್ಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ಪದೇ ಪದೇ ವಿಚಾರಣೆಗೆ ಒಳಪಡಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು.
Published on

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 29 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರು ನ್ಯಾಯಾಲಯ ಗುರುವಾರ ಸಮನ್ಸ್ ಜಾರಿ ಮಾಡಿದೆ.

ಜೂನ್ 2022 ರಲ್ಲಿ, ಎರಡು ವರ್ಷಗಳ ಹಿಂದೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ಪದೇ ಪದೇ ವಿಚಾರಣೆಗೆ ಒಳಪಡಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು.

ರಾಹುಲ್ ಗಾಂಧಿಯವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವ ಇಡಿ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಪ್ರತಿಭಟನೆಯನ್ನು ಆಯೋಜಿಸಿತ್ತು. ಆದರೆ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕೆಂದು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದರು. ಈ ಆದೇಶ ಉಲ್ಲಂಘಿಸಿ ಡಿ.ಕೆ.ಶಿವಕುಮಾರ್ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನೆ ನಡೆಸಿದ್ದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
ನನ್ನ ವಿರುದ್ಧ ಇಡಿ ದಾಳಿ ನಡೆಸಲು ಯೋಜಿಸಲಾಗಿದೆ: ರಾಹುಲ್ ಗಾಂಧಿ

ಆದೇಶವನ್ನು ಧಿಕ್ಕರಿಸಿದ ಸಿದ್ದರಾಮಯ್ಯ, ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರತಿಭಟನೆಯಿಂದ ಸಾರ್ವಜನಿಕ ಶಾಂತಿಗೆ ಭಂಗವುಂಟಾಗಿದೆ ಮತ್ತು ಅಧಿಕಾರಿಗಳಿಂದ ಅಗತ್ಯ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಇದೇ ಪ್ರತಿಭಟನೆ ಸಂಬಂಧ ಡಿಕೆ ಶಿವಕುಮಾರ್ ಅವರ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಇದೀಗ ವಿಲ್ಸನ್ ಗಾರ್ಡನ್​ ಕೇಸ್​ನಲ್ಲಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಆಗಸ್ಟ್​ 29ರಂದು ಖುದ್ದು ಹಾಜರಾಗುವಂತೆ ಸಮನ್ಸ್​ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com