
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಜನರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರತಿ ತಿಂಗಳ 2 ಮತ್ತು ನಾಲ್ಕನೇ ಶನಿವಾರದಂದು ಕನಕಪುರಕ್ಕೆ ಭೇಟಿ ನೀಡುವುದಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗೆ ಬೆಂಗಳೂರಿನಲ್ಲಿ ನನ್ನನ್ನು ಭೇಟಿ ಮಾಡಲು ಅನಾನುಕೂಲವಾಗಿದೆ. ಹೀಗಾಗಿ ಅವರ ಮನೆ ಬಾಗಿಲಿಗೆ ತೆರಳಿ ಸಮಸ್ಯೆ ಆಲಿಸಲು ನಿರ್ಧರಿಸಿದ್ದು, ಆ ಎರಡು ದಿನ ಜನರಿಂದ ಮನವಿ ಸ್ವೀಕರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಜುಲೈ 26 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಜಿಲ್ಲೆಯು ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಮತ್ತು ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡಿದೆ.
Advertisement