ಸಿಎಂ ಸಿದ್ದರಾಮಯ್ಯ ಭೇಟಿಯಾದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್; ಕುಮ್ಕಿ ಆನೆ ಕಳುಹಿಸುವಂತೆ ಮನವಿ

ಪವನ್ ಕಲ್ಯಾಣ ಅವರು ವಿಧಾನಸೌಧದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಾನವ - ಆನೆ ಸಂಘರ್ಷ ನಿರ್ವಹಣೆ ಕುರಿತ ಅರಣ್ಯ ಇಲಾಖೆಯ ಸಭೆಯಲ್ಲಿ ಭಗಾವಹಿಸಲು ಬೆಂಗಳೂರಿಗೆ ಆಗಮಿಸಿದ್ದಾರೆ.
ಸಿದ್ದರಾಮಯ್ಯ - ಪವನ್ ಕಲ್ಯಾಣ್
ಸಿದ್ದರಾಮಯ್ಯ - ಪವನ್ ಕಲ್ಯಾಣ್
Updated on

ಬೆಂಗಳೂರು: ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಹಾಗೂ ತೆಲುಗು ನಟ ಪವನ್ ಕಲ್ಯಾಣ್ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿಯಾದರು.

ಪವನ್ ಕಲ್ಯಾಣ ಅವರು ವಿಧಾನಸೌಧದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಾನವ - ಆನೆ ಸಂಘರ್ಷ ನಿರ್ವಹಣೆ ಕುರಿತ ಅರಣ್ಯ ಇಲಾಖೆಯ ಸಭೆಯಲ್ಲಿ ಭಗಾವಹಿಸಲು ಬೆಂಗಳೂರಿಗೆ ಆಗಮಿಸಿದ್ದು, ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು.

ಆಂಧ್ರ ಪ್ರದೇಶ ಚುನಾವಣೆ ಗೆಲುವಿಗೆ ಮತ್ತು ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡ ,ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್ ಅವರಿಗೆ ಸಿಎಂ ಶುಭಾಶಯ ತಿಳಿಸಿದರು.

ಬಳಿಕ ಎರಡು ರಾಜ್ಯಗಳ ಅರಣ್ಯ ಇಲಾಖೆ ಅಧಿಕಾರಗಳೊಂದಿಗೆ ಸಭೆ ನಡೆಸಿ, 7 ಅಂಶಗಳ ಅಜೆಂಡಾ ಅಡಿ ಮಾತುಕತೆ ನಡೆಸಿದರು.

ಆನೆ ಹಾವಳಿ ತಪ್ಪಿಸಲು ಆಗಸ್ಟ್ 12 ರಂದು ವಿಶ್ವ ಆನೆಗಳ ದಿನದಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ನಡೆಸಲಾಗುವುದು. ಈ ಸಮ್ಮೇಳನದಲ್ಲಿ ವಿಶ್ವಾದ್ಯಂತದಿಂದ ತಜ್ಞರು ಆಗಮಿಸಲಿದ್ದಾರೆ. ಈ ಸಮ್ಮೇಳನದಲ್ಲಿ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಣಕ್ಕೆ ಯಾವ ಯಾವ ದೇಶದಲ್ಲಿ ಯಾವ ರೀತಿಯ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗಿದೆ. ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿ ಕೂಡ ಅಳವಡಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ ನೀಡಿದ್ದಾರೆ.

ಈಶ್ವರ್ ಖಂಡ್ರೆ, ಪವನ್ ಕಲ್ಯಾಣ್
ಈಶ್ವರ್ ಖಂಡ್ರೆ, ಪವನ್ ಕಲ್ಯಾಣ್

ಕುಮ್ಕಿ ಆನೆ ಕಳುಹಿಸುವಂತೆ ಪವನ್ ಕಲ್ಯಾಣ್ ಮನವಿ

ವಿಧಾನಸೌಧದಲ್ಲಿ ಸಚಿವ ಈಶ್ವರ್‌ ಖಂಡ್ರೆ ಅವರೊಂದಿಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಂಧ್ರ ಡಿಸಿಎಂ, ಆಂಧ್ರ ಪ್ರದೇಶದ ಅರಣ್ಯ ಇಲಾಖೆ ಖಾತೆ ನಾನು ನಿಭಾಯಿಸುತ್ತಿದ್ದೇನೆ. ಡಾ. ರಾಜ್ ಕುಮಾರ್ ಅವರ ಗಂಧದಗುಡಿ ಸಿನಿಮಾವನ್ನು ನಾನು ನೋಡಿದ್ದೇನೆ. ಕಳ್ಳಸಾಗಾಣೆಯಿಂದ ಯಾವ ರೀತಿ ಅರಣ್ಯ ರಕ್ಷಣೆ ಮಾಡುತ್ತಾರೆ ಎಂಬುದು ಆ ಚಿತ್ರದಲ್ಲಿದೆ. ರಿಯಲ್ ಲೈಫ್ ನಲ್ಲೂ ಇದನ್ನ ರಕ್ಷಣೆ ಮಾಡಬೇಕಿದೆ. ಕರ್ನಾಟಕದ ಜೊತೆ ನಮ್ಮ‌ರಾಜ್ಯ ಉತ್ತಮ ಸಂಬಂಧ ಹೊಂದಿದೆ. ಇಂದಿನ ಸಭೆಯಲ್ಲಿ ಏಳು ವಿಚಾರಗಳ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ರಕ್ತಚಂದನ ರಕ್ಷಣೆ, ಪುಂಡಾನೆ ಸೆರೆಹಿಡಿಯೋದು, ಅರಣ್ಯ ರಕ್ಷಣೆ ಸೇರಿದಂತೆ ಏಳು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯ - ಪವನ್ ಕಲ್ಯಾಣ್
ಆಂಧ್ರ ಪ್ರದೇಶಕ್ಕೆ ತರಬೇತಿ ಪಡೆದ ಒಂಬತ್ತು ಆನೆಗಳನ್ನು ನೀಡಲು ಕರ್ನಾಟಕ ಒಪ್ಪಿಗೆ

ಕುಮ್ಕಿ ಆನೆಗಳು ಕಾಡು ಆನೆಗಳನ್ನು ಓಡಿಸಲು ಸಹಾಯ ಮಾಡುವುದರಿಂದ, ರಾಜ್ಯದ ಕೆಲವು ಭಾಗಗಳಲ್ಲಿ ಅನಾಹುತವನ್ನು ಉಂಟುಮಾಡುವ ಕಾಡು ಆನೆಗಳನ್ನು ಓಡಿಸಲು ಆಂಧ್ರ ಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಕರ್ನಾಟಕಕ್ಕೆ ಮನವಿ ಮಾಡಿದ್ದೇವೆ ಎಂದರು.

ಕಳೆದ ಮೇ ತಿಂಗಳಲ್ಲಿ ಆಂಧ್ರಪ್ರದೇಶದ ಅರಣ್ಯ ಇಲಾಖೆ ಅಧಿಕಾರಿಗಳು, ಒಂಬತ್ತು ತರಬೇತಿ ಪಡೆದ ಕುಮ್ಕಿ ಆನೆಗಳನ್ನು ನೀಡುವಂತೆ ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ಇತ್ತೀಚೆಗೆ, ಒಡಿಶಾ ಕೂಡ ತಮಿಳುನಾಡು ಸರ್ಕಾರಕ್ಕೆ ಮಾನವ-ಆನೆ ಸಂಘರ್ಷದ ಸಮಸ್ಯೆಯನ್ನು ಪರಿಹರಿಸಲು ಕೆಲವು ಕುಮ್ಕಿ ಆನೆಗಳನ್ನು ನೀಡುವಂತೆ ಮನವಿ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com