ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಖಾಸಗಿ ದೂರು ದಾಖಲಾಗಿದೆ.
ದೂರುದಾರರಾದ ಮೈಸೂರು ಮೂಲದ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಈ ಹಗರಣದಲ್ಲಿ ಮುಖ್ಯಮಂತ್ರಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.
'ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರು ದಾಖಲಿಸಿದ್ದು, ಈ ಕುರಿತು ಸಿಬಿಐ ಅಥವಾ ಇತರ ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವಂತೆ ನಿರ್ದೇಶನ ನೀಡಿ ಎಂದು ನ್ಯಾಯಾಲಯಕ್ಕೆ ಕೋರಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಸುಳ್ಳು ದೂರುಗಳಿಗೆ ಉತ್ತರಿಸುವ ಶಕ್ತಿ ನನಗಿದೆ’. 'ಸುಳ್ಳು ಪ್ರಕರಣಗಳು ಕಾನೂನಿನ ಮುಂದೆ ನಿಲ್ಲುವುದಿಲ್ಲ' ಎಂದು ಸಿಎಂ ಮೈಸೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
Advertisement