ಬೆಂಗಳೂರು: ಬೆಂಗಳೂರಿನ ಪೀಣ್ಯದ ಎನ್‌ಟಿಎಸ್ ಸರ್ಕಲ್‌ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು ಮತೋರ್ವನ ಸ್ಥಿತಿ ಗಂಭೀರವಾಗಿದೆ.
ಕಟ್ಟಡದ ನಾಲ್ಕನೇ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿತದಿಂದಾಗಿ ಈ ಘಟನೆ ನಡೆದಿದೆ. ಕಟ್ಟಡದ ನಾಲ್ಕನೇ ಮಹಡಿಗೆ ಕಾಂಕ್ರೀಟ್ ಹಾಕುತ್ತಿದ್ದಾಗ, ಏಕಾಏಕಿ ಸೆಂಟ್ರಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು ಮತೋರ್ವನ ಸ್ಥಿತಿ ಗಂಭೀರವಾಗಿದೆ.
ಮೃತ ಕಾರ್ಮಿಕನನ್ನು 28 ವರ್ಷದ ಹಿಮಾಂಶು ಸ್ಥಳದಲ್ಲೇ ಮೃತಪಟ್ಟರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಪ್ರಕಾಶ್ ಮೃತಪಟ್ಟಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement