ನೆಲಮಂಗಲದಲ್ಲಿ ಲಾರಿ ಮತ್ತು ಟೆಂಪೊ ನಡುವೆ ಭೀಕರ ಅಪಘಾತ: ಮೂವರ ದುರ್ಮರಣ

ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ ಮೂವರು ದುರ್ಮರಣ ಹೊಂದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನೆಲಮಂಗಲ: ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ ಮೂವರು ದುರ್ಮರಣ ಹೊಂದಿದ್ದಾರೆ.

ಮೃತರನ್ನು ಯಾದಗಿರಿ ಮೂಲದ ಕಟ್ಟಡ ಕಾರ್ಮಿಕ 35 ವರ್ಷದ ನರಸಪ್ಪ, 34 ವರ್ಷದ ಹುಸೇನಪ್ಪ ಹಾಗೂ ನಡೆದುಕೊಂಡು ಹೋಗುತ್ತಿದ್ದ ತುಮಕೂರು ತಾಲೂಕಿನ ಸೀತಕಲ್ಲು ನಿವಾಸಿ 55 ವರ್ಷದ ಶಿವಗಂಗಪ್ಪ ಎಂದು ತಿಳಿದುಬಂದಿದೆ.

ಟೆಂಪೊದಲ್ಲಿ ತೆರಳುತ್ತಿದ್ದ ಯಾದಗಿರಿ ಮೂಲದ ಲಕ್ಷ್ಮೀ, ಭಾನುಪ್ರಿಯಾ, ಅನಂತಪ್ಪ, ನಾಗರಾಜು, ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇನ್ನುಳಿದಂತೆ ಬಂಗಾರಪ್ಪ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಸಾಬಣ್ಣ, ಕಟ್ಟಪ್ಪಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ
ಬೀದರ್: ಬಸ್‌, ಆಟೋ ನಡುವೆ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com