ಬೀದರ್: ಬಸ್ ಆಟೋ ನಡುವೆ ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜು ಗುಜ್ಜಾಗಿದ್ದು, ಸಂಪೂರ್ಣ ಜಖಂಗೊಂಡಿದೆ.
ಅಪಘಾತದಲ್ಲಿ ಅನಿತಾ ಬಾಯಿ (45) ಮತ್ತು ಅವರ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿತರ ಮೂವರು ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಬೀದರ್‌ನ ಹೊನ್ನಕೇರಿ ತಾಂಡಾ ನಿವಾಸಿಗಳು ಎಂದು ಗುರುತಿಸಲಾಗಿದೆ. ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
Advertisement