ಮಂಡ್ಯ: ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಂದು ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದ ರೈತ ಲಕ್ಷ್ಮಣ ಅವರ ಗದ್ದೆಯಲ್ಲಿ ಭತ್ತ ನಾಟಿ ಮಾಡಿದರು.
ಈ ಕುರಿತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಭೂಮಿ ತಾಯಿ ಮಕ್ಕಳಾದ ನಮೆಲ್ಲರಿಗೂ ಭೂಮಿಯೇ ಸರ್ವಸ್ವ. ಬೇಸಾಯವೇ ಬದುಕು. ಭತ್ತದ ನಾಟಿ ನನ್ನ ಮನೆಯ ಕಾರ್ಯಕ್ರಮವೇ ಆಗಿತ್ತು.ರೈತಾಪಿ ಜನರೊಂದಿಗೆ ಇಂತಹ ಸಾರ್ಥಕ, ಅನನ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ನನ್ನಲ್ಲಿ ಧನ್ಯತೆಯ ಭಾವ ಉಂಟು ಮಾಡಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಸಮಸ್ತ ಅನ್ನದಾತರಿಗೆ ಹೆಗಲು ಕೊಡುವ ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಅವರು ಹೇಳಿದ್ದಾರೆ.
Advertisement