ವಿವಿಧ ರಂಗಾಯಣಗಳ ನಿರ್ದೇಶಕರು, ಅಕಾಡೆಮಿ ಪ್ರಾಧಿಕಾರಿಗಳ ಸದಸ್ಯರ ನೇಮಕ

ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ. ಸಾಗರ ಕಲಬುರಗಿ ರಂಗಾಯಣ ನಿರ್ದೇಶಕರಾಗಿ ಡಾ. ಸುಜಾತ ಜಂಗಮಶೆಟ್ಟಿ ನೇಮಕ
ರಂಗಾಯಣದ ನೂತನ ನಿರ್ದೇಶಕರು
ರಂಗಾಯಣದ ನೂತನ ನಿರ್ದೇಶಕರು
Updated on

ಬೆಂಗಳೂರು: ರಾಜ್ಯದ ಆರು ರಂಗಾಯಣಗಳ ನಿರ್ದೇಶಕರು ಹಾಗೂ ವಿವಿಧ ಅಕಾಡೆಮಿ, ಪ್ರಾಧಿಕಾರಿಗಳ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ. ಸಾಗರ ಕಲಬುರಗಿ ರಂಗಾಯಣ ನಿರ್ದೇಶಕರಾಗಿ ಡಾ. ಸುಜಾತ ಜಂಗಮಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಮತ್ತು ಕಾರ್ಕಳದ ಯಕ್ಷ ರಂಗಾಯಣ ನಿರ್ದೇಶಕರಾಗಿ ವೆಂಕಟರಮಣ ಐತಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶ ಹೊರಡಿಸಲಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗವಾಗಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com